ಸಾರಾಂಶ
ಪ್ರಮುಖ ಸರ್ಕಲ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ
ಕನ್ನಡಪ್ರಭ ವಾರ್ತೆ ಚಾಮರಾಜನಗರರಾಷ್ಟ್ರದ ಪ್ರಧಾನಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಪ್ರಮುಖ ವೃತ್ತಗಳಲ್ಲಿ ಮೋದಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹಾಗು ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಮೋದಿ ಭಾವಚಿತ್ರಕ್ಕೆ ಪುಷ್ಪ ವೃಷ್ಠಿ ಮಾಡಿದರು. ಅಲ್ಲದೇ ಯುವಕರು ಬಿಜೆಪಿ ಬಾವುಟ ಹಿಡಿದು ಬೈಕ್ ರ್‍ಯಾಲಿಯನ್ನು ಸಹ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಟರಾಜು ಪ್ರಧಾನಿ ಮೋದಿ ಅವರು ಮೂರನೇ ಅವಧಿಗೆ ಎನ್‌ಡಿಎ ಮೈತ್ರಿಕೂಟದಿಂದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಹೆಮ್ಮೆ ತಂದಿದೆ. ಎರಡು ಅವಧಿಯಲ್ಲಿ ಅವರು ಮಾಡಿರುವ ಸಾಧನೆಯನ್ನು ನೀಡಿ, ದೇಶದ ಜನರು ಮತ್ತೊಮ್ಮೆ ಅವರು ಪ್ರಧಾನಿಯಾಗಬೇಕೆಂದು ಕನಸು ಕಂಡಿದ್ದರು. ಅದರಂತೆ ಇಂದು ರಾಷ್ಟ್ರಪತಿ ಭವನದ ಮುಂದೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಾ.ನಗರದಲ್ಲಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಸಂಭ್ರಮಿಸುತ್ತಿದ್ದೇವೆ ಎಂದರು. ಅದೇ ರೀತಿ ನಮ್ಮ ನಾಯಕರಾದ ವಿ. ಸೋಮಣ್ಣ ಅವರು ಸಹ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಪಡೆದಿದ್ದು, ಹೆಚ್ಚಿನ ಸಂತೋಷ ತಂದಿದೆ. ತುಮಕೂರು ಸಂಸದರಾಗಿ ಆಯ್ಕೆಯಾಗುತ್ತಿದ್ದಂತೆ ಅವರಿಗೆ ರಾಷ್ಟ್ರೀಯ ವರಿಷ್ಠರು ಸಚಿವರನ್ನಾಗಿ ಮಾಡಿರುವುದು ಅವರ ಸಂಘಟನೆಯ ಚತುರತೆಯನ್ನು ತೋರಿಸುತ್ತದೆ ಎಂದು ನಟರಾಜು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಗರ ಮಂಡಲದ ಅಧ್ಯಕ್ಷ ಶಿವರಾಜು, ಮುಖಂಡರಾದ ಕೆಲ್ಲಂಬಳ್ಳಿ ಸೋಮನಾಯಕ, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್ ನಾಯಕ, ಡಾ. ಬಾಬು, ಎಸ್. ಬಾಲಸುಬ್ರಮಣ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಮನೋಜ್‌ಪಟೇಲ್, ವಿಜಯೇಂದ್ರ, ಎ ಸೂರ್ಯಬಾಲರಾಜು, ವಿರಾಟ್ ಶಿವು, ಆರ್. ಸುಂದರ್, ಕೂಸಣ್ಣ, ಜಯಸುಂದರ್,ಮಾರ್ಕೇಟ್ ಕುಮಾರ್, ಉತ್ತುವಳ್ಳಿ ಮಹೇಶ್, ಪರಶಿವ, ಕೇಬಲ್ ರಂಗಸ್ವಾಮಿ ಮಂಜುನಾಥ್ ಮೊದಲಾದವರು ಇದ್ದರು.