ಸಾರಾಂಶ
ಇಳಕಲ್ಲ ನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಹುನಗುಂದ ಘಟದಿಂದ ವತಿಯಿಂದ ನಾರಿ ಶಕ್ತಿ ವಂದನಾ ಯಾತ್ರೆ ಅಭಿಯಾನ ನಿಮಿತ್ತ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್‍ಯಾಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಇಳಕಲ್ಲ
ನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಹುನಗುಂದ ಘಟದಿಂದ ವತಿಯಿಂದ ನಾರಿ ಶಕ್ತಿ ವಂದನಾ ಯಾತ್ರೆ ಅಭಿಯಾನ ನಿಮಿತ್ತ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್‍ಯಾಲಿ ನಡೆಯಿತು.ನಗರದ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ಬೈಕ್ ರ‍್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರ ಗೃಹಕಚೇರಿಯಲ್ಲಿ ಸಮಾಪ್ತಿಗೊಂಡಿತು. ರ‍್ಯಾಲಿಯ ಕುರಿತು ಮಹಿಳಾ ಮೋರ್ಚಾದ ತೃಪ್ತಿ ಸಾಲಿಮಠ, ಮಹಿಳಾ ಮೋರ್ಚಾ ಪದಾಧಿಕಾರಿಗಳು ಮಾತನಾಡಿದರು.
೨೦೨೪ಕ್ಕೆ ಮತ್ತೆಮ್ಮೆ ಮೋದಿಜಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಪ್ರಮುಖರು, ಪಕ್ಷದ ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ಮತ್ತೊಮ್ಮೆ ಮೋದಿ ಎಂಬ ಘೋಷಣೆಯೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.ಹುನಗುಂದ, ಇಳಕಲ್ಲ ತಾಲೂಕಿನ ಮಹಿಳಾ ಮೋರ್ಚಾ ಪದಾಧಿಕಾರಿಗಳು, ನಗರಸಭೆ ಬಿಜೆಪಿ ಸದಸ್ಯರು, ಬಿಜೆಪಿ ನಗರ ಗ್ರಾಮೀಣ ಮಂಡಲದ ವಿವಿಧ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.