ಕನ್ನಡಪ್ರಭವಾರ್ತೆ ನಾಪೋಕ್ಲು
ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಪಟ್ಟಚರವ೦ಡ ಗಗನ್ ವೇದಪ್ಪ, ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪಡೆದ ಬಿ.ಎ. ವನಜ, ಸಮುದಾಯದೊಂದಿಗೆ ಉತ್ತಮ ಹೊಂದಾಣಿಕೆ ಪ್ರಶಸ್ತಿ ಪಡೆದ ಡಿ.ಕೆ ಕವಿತಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿ ಕನಕವತಿ ಅವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಸನ್ಮಾನಿತರು ಮಾತನಾಡಿ ತಮ್ಮ ಸೇವಾ ಅವಧಿಯ ನೆನಪುಗಳನ್ನು ಮೆಲುಕು ಹಾಕಿದರು.ನರಿಯಂದಡ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೇ ಪೆಮ್ಮಂಡ ಕೌಶಿ ಕಾವೇರಮ್ಮ ವಹಿಸಿದ್ದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾ ಣಯ್ಯ, ಮಾಜಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಪಿಡಿಒ ಆಶಾ ಕುಮಾರಿ, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಜರಿದ್ದರು.