ಸಾರಾಂಶ
ಶಿರಾ: ತಾಲೂಕಿನ ಬಸವನಹಳ್ಳಿ ಗ್ರಾಮದ ಹಿರಿಯ ರಂಗಭೂಮಿ ಕಲಾವಿದ ಎಲ್.ಎಚ್.ರಂಗನಾಥಪ್ಪ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯಿಂದ 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಎಲ್.ಎಚ್.ರಂಗನಾಥಪ್ಪ ಸುಮಾರು 50 ವರ್ಷಗಳಿಂದಲೂ ರಂಗಭೂಮಿಯಲ್ಲಿ ತೊಡಗಿಕೊಂಡಿದ್ದಾರೆ. 12ನೇ ವಯಸ್ಸಿನಲ್ಲಿ ಭಕ್ತ ಪ್ರಹ್ಲಾದನ ಪಾತ್ರದಲ್ಲಿ ಮೊಟ್ಟ ಮೊದಲಿಗೆ ಅಭಿನಯಿಸಿ, ಅಲ್ಲಿಂದ ಇಲ್ಲಿಯವರೆಗೂ ರಂಗಭೂಮಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗಡಿನಾಡು ಜಾನಪದ ರಂಗೋತ್ಸವ, ರಂಗ ಸಂಗೀತೋತ್ಸವ ಸೇರಿದಂತೆ ನೂರಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಎಲ್.ಎಚ್.ರಂಗನಾಥಪ್ಪ ಅವರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ದೆಹಲಿ ಕನ್ನಡ ಸಂಘ ಪ್ರಶಸ್ತಿ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಅಭಿನಂದನೆ: ಹಿರಿಯ ರಂಗಭೂಮಿ ಕಲಾವಿದ ಎಲ್.ಎಚ್.ರಂಗನಾಥಪ್ಪ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯಿಂದ 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಶಾಸಕ ಡಾ.ಟಿ.ಬಿ.ಜಯಚಂದ್ರ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ಅಭಿನಂದನೆ ಸಲ್ಲಿಸಿದ್ದಾರೆ.