ಸಂಡೂರಿನಲ್ಲಿ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ

| Published : Mar 22 2024, 01:01 AM IST

ಸಾರಾಂಶ

ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎಂಬ ವಿಷಯವನ್ನು ಎಲ್ಲರೂ ತಿಳಿಯಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೈಹಿಕ, ಮಾನಸಿಕ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ನೀಡಬೇಕು.

ಸಂಡೂರು: ಪಟ್ಟಣದ ಕೃಪಾನಿಲಯ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ವೈದ್ಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನವನ್ನು ಹಮ್ಮಿಕೊಳ್ಳಲಾಯಿತು.ಆಪ್ತ ಸಮಾಲೋಚಕ ಪ್ರಶಾಂತ್ ಮಾತನಾಡಿ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎಂಬ ವಿಷಯವನ್ನು ಎಲ್ಲರೂ ತಿಳಿಯಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೈಹಿಕ, ಮಾನಸಿಕ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ನೀಡಬೇಕು. ಮಕ್ಕಳು ತಮ್ಮ ತಂದೆ-ತಾಯಿಗಳು ಹಾಗೂ ಗುರುಹಿರಿಯರ ಮಾರ್ಗದರ್ಶನದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ದುಶ್ಚಟಗಳಿಗೆ ಒಳಗಾಗಬಾರದು ಎಂದರು.ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ನೇಹಾ ಕ್ಲಿನಿಕ್ ತೆರೆಯಲಾಗಿದೆ. ಅಲ್ಲಿ ಆರೋಗ್ಯ ಸಮಸ್ಯೆಗಳಿದ್ದಲ್ಲಿ, ಕ್ಲಿನಿಕ್‌ಗೆ ಭೇಟಿ ನೀಡಿ ಆಪ್ತ ಸಮಾಲೋಚಕರ ಮೂಲಕ ಸೂಕ್ತ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ಮುಖ್ಯ ಶಿಕ್ಷಕಿ ಸಿಸ್ಟರ್ ಶೆರ್ಲಿ ಅವರು ಮಾತನಾಡಿ, ಆರೋಗ್ಯವೇ ಮಹಾಭಾಗ್ಯ ಎಂಬ ಮಾತಿನಂತೆ ಪ್ರತಿಯೊಬ್ಬರೂ ಉತ್ತಮ ಆರೋಗ್ಯದ ಕಡೆಗೆ ಗಮನ ಕೊಡಬೇಕು ಎಂದರು.ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ತಾಲ್ಲೂಕು ಘಟಕದ ಖಜಾಂಚಿ ಮಹಮ್ಮದ್ ಜವೀದ್, ಶಾಲೆಯ ಗೈಡ್ಸ್ ಶಿಕ್ಷಕಿ ಯಾಸಿನಾ, ಸ್ಕೌಟ್ ಶಿಕ್ಷಕ ಎ. ಮರಿಸ್ವಾಮಿ ಉಪಸ್ಥಿತರಿದ್ದರು.