ಸಾರಾಂಶ
ಡಾ. ಮೌಲಾನ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮ ದಿನಾಚರಣೆಯ ಆಂಗವಾಗಿ ಇಲ್ಲಿನ ವೈಕುಂಠ ಬಾಳಿಗಾ ಕಾಲೇಜಿನ ಎನ್. ಎಸ್. ಎಸ್. ಘಟಕದ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನ ಆಚರಿಸಲಾಯಿತು.
ಉಡುಪಿ: ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿ ಭಾರತ ರತ್ನ ಡಾ. ಮೌಲಾನ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮ ದಿನಾಚರಣೆಯ ಆಂಗವಾಗಿ ಇಲ್ಲಿನ ವೈಕುಂಠ ಬಾಳಿಗಾ ಕಾಲೇಜಿನ ಎನ್. ಎಸ್. ಎಸ್. ಘಟಕದ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಎನ್. ಎಸ್, ಎಸ್ ಕಾರ್ಯಕ್ರಮಾಧಿಕಾರಿ ಡಾ. ಸಿ. ಬಿ. ನವೀನ್ ಚಂದ್ರ ಮಾತನಾಡಿ, ಭಾರತ ರತ್ನ ಮೌಲಾನಾ ಆಜಾದ ಅವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಪ್ರತಿಯೊಬ್ಬ ಭಾರತೀಯನು ಸ್ಮರಿಸುವುದು ಅತ್ಯಗತ್ಯವಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸುರೇಖಾ ಅವರು ಮಾತನಾಡಿ, ಸ್ವತಂತ್ರ ಭಾರತದ ಶಿಕ್ಷಣದ ರೂಪುರೇಷೆ ನೀಡಿದವರು ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರು ಸದಾ ಸ್ಮರಣೀಯರು ಎಂದರು.ಕಾಲೇಜಿನ ಮಾನವಿಕ ವಿಭಾಗದ ಮುಖ್ಯಸ್ಥ ಪ್ರೊ. ರೋಹಿತ್ ಅಮೀನ್, ಉಪ ಪ್ರಾಂಶುಪಾಲ ಡಾ. ಪ್ರೀತಿ ಹರೀಶರಾಜ್, ಕಾನೂನು ವಿಭಾಗದ ಮುಖ್ಯಸ್ಥ ಡಾ. ಜಯಮೋಲ್ ಹಾಗೂ ಎಲ್ಲಾ ಬೋದಕ ಮತ್ತು ಬೋದಕೇತರ ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮವನ್ನು ಎನ್. ಎಸ್. ಎಸ್, ಅಧಿಕಾರಿ ಶ್ರೀ ಅಮೋಘ ಗಾಡ್ಕರ್ ಸಂಯೋಜಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))