ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರರಾಷ್ಟ್ರಮಟ್ಟದ ಅಂತರ್ ಸೈನಿಕ ಶಾಲೆಗಳ ಪುಟ್ಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆಯ ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡವು ದ್ವಿತೀಯ ಸ್ಥಾನ ಪಡೆದಿದೆ.ಒರಿಸ್ಸಾದ ಭುವನೇಶ್ವರ ಪುಟ್ಬಾಲ್ ಕ್ರೀಡಾಂಗಣದಲ್ಲಿ ನಡೆದ ಪುಟ್ಬಾಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸೈನಿಕ ಶಾಲೆಯ ಜೂನಿಯರ್ ವಿಭಾಗದ ವಿದ್ಯಾರ್ಥಿಗಳನ್ನು ಕೂಡಿಗೆಯ ಪ್ರಮುಖ ಬೀದಿಗಳಲ್ಲಿ ವಾಹನದ ಮೂಲಕ ವಿಜಯೋತ್ಸವದ ಮೆರವಣಿಗೆ ನಡೆಸಲಾಯಿತು.ಕೊಡಗು ಸೈನಿಕ ಶಾಲೆ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್, ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.ಪುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಸೈನಿಕ ಶಾಲೆಯ ಜೂನಿಯರ್, ಸಬ್ ಜೂನಿಯರ್ ಮತ್ತು ಬಾಲಕಿಯರ ತಂಡಗಳಾಗಿ ಒಟ್ಟು 48 ವಿದ್ಯಾರ್ಥಿಗಳು 3 ತಂಡವಾಗಿ ಪಾಲ್ಗೊಂಡಿದ್ದರು.ಬಾಲಕರ ಜೂನಿಯರ್ ತಂಡವು ರಾಷ್ಟ್ರಮಟ್ಟದ ಸೈನಿಕ ಶಾಲೆ ವಿಭಾಗದಲ್ಲಿ ಇದೇ ಪ್ರಥಮ ಬಾರಿಗೆ ಪ್ರಶಸ್ತಿ ಗೆದ್ದಿದೆ.ತಂಡಕ್ಕೆ ಶೇಖ್ ಅಜೀಜ್ ತರಬೇತಿ ನೀಡಿದ್ದಾರೆ. ಮೆರವಣಿಗೆಯ ಸಂದರ್ಭದಲ್ಲಿ ಶಾಲೆಯ 600ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪ ಪ್ರಾಂಶುಪಾಲ ಸೇರಿದಂತೆ ಉಪನ್ಯಾಸಕ ವೃಂದ, ಭೋದಕ ವರ್ಗ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಮೆರವಣಿಗೆಯಲ್ಲಿ ಸೈನಿಕ ಶಾಲಾ ವಿದ್ಯಾರ್ಥಿಗಳಿಂದ ಡೊಳ್ಳು ಕುಣಿತ, ತಮಟೆ ವರಸೆ, ಕೊಡವ ವಸ್ತ್ರ ಧರಿಸಿದ ವಿದ್ಯಾರ್ಥಿಗಳು ಮೆರುಗು ನೀಡಿದರು.