ರಾಷ್ಟ್ರೀಯ ಕ್ರೀಡಾಕೂಟ: ಉಡುಪಿ ವಿದ್ಯಾರ್ಥಿನಿಯರಿಗೆ ಚಿನ್ನ, ಬೆಳ್ಳಿಯ ಪದಕ

| Published : Aug 09 2025, 12:03 AM IST

ಸಾರಾಂಶ

ಎಚ್.ಸಿ.ಎಲ್. ಫೌಂಡೇಶನ್ ಚೆನೈನಲ್ಲಿ ನಡೆಸಿದ 7ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪೂರ್ಣಿಮಾ ಉದ್ದಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇದೇ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿ ಮಾನ್ಯ ಹರ್ಡಲ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಮಹಿಳಾ ಕ್ರೀಡಾಪಟುಗಳನ್ನು ಉತ್ತೇಜಿಸುವ ಸಲುವಾಗಿ ಎಚ್.ಸಿ.ಎಲ್. ಫೌಂಡೇಶನ್ ಚೆನೈನಲ್ಲಿ ನಡೆಸಿದ 7ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪೂರ್ಣಿಮಾ ಉದ್ದಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇದೇ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿ ಮಾನ್ಯ ಹರ್ಡಲ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ಬಂದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಪರವಾಗಿ ಸಂಭ್ರಮದ ಸ್ವಾಗತ ಕೋರಲಾಯಿತು. ಕಾಲೇಜಿನ ಪ್ರಾಂಶುಪಾಲ ಜಗದೀಶ ಕುಮಾರ ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಇಂದಿರಾ ಈ ಇಬ್ಬರು ಸಾಧಕ ಕ್ರೀಡಾಪಟುಗಳನ್ನು ಸನ್ಮಾನಿಸಿದರು.ಕಾಲೇಜಿನ ದೈಹಿಕ ಶಿಕ್ಷಕ ವಸಂತ ಜೋಗಿ ಕ್ರೀಡಾಪಟುಗಳ ಸಾಧನೆಯ ಹೆಜ್ಜೆಗಳ ಬಗ್ಗೆ ಮಾತನಾಡಿದರು. ಶಿಕ್ಷಣ ಸೇವಾ ಸಮಿತಿಯ ಶೇಖರ ಕೋಟ್ಯಾನ್, ಉಪನ್ಯಾಸಕ ಮತ್ತು ಅಧ್ಯಾಪಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.