ರಾಜಾಂಗಣದಲ್ಲಿ ಇಂದು ಮತ್ತು ನಾಳೆ ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್

| Published : Nov 16 2024, 12:31 AM IST

ರಾಜಾಂಗಣದಲ್ಲಿ ಇಂದು ಮತ್ತು ನಾಳೆ ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್
Share this Article
  • FB
  • TW
  • Linkdin
  • Email

ಸಾರಾಂಶ

ನ.16ರಂದು ಬೆಳಗ್ಗೆ 10 ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಪಟ್ಟ ಯತಿ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಕೃಷ್ಣಮಠ, ಪರ್ಯಾಯ ಪುತ್ತಿಗೆ ಮಠ ಹಾಗೂ ಬುಡೋಕಾನ್ ಕರಾಟೆ ಆ್ಯಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಆಶ್ರಯದಲ್ಲಿ ಎರಡು ದಿನಗಳ ‘4ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್’ ಅನ್ನು ನ.16 ಮತ್ತು 17ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಕುಮಾರ್ ಅಂಬಲಪಾಡಿ ತಿಳಿಸಿದರು.ಅವರು ಶುಕ್ರವಾರ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಗಳನ್ನು ನೀಡಿದರು.

ನ.16ರಂದು ಬೆಳಗ್ಗೆ 10 ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಪಟ್ಟ ಯತಿ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ.

ಅಂಬಲಪಾಡಿ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಕಾಪು ಶಾಸಕ ಸುರೇಶ್ ಶೆಟ್ಟಿ ಸ್ಪರ್ಧಾಕೂಟದ ಪ್ರಶಸ್ತಿಗಳನ್ನು ಅನಾವರಣ ಮಾಡಲಿದ್ದಾರೆ. ನ.17ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಸ್ಪರ್ಧಾಕೂಟದ ಸಂಘಟಕರಾದ ವಾಮನ್ ಪಾಲನ್, ರೋಹಿತಾಕ್ಷ ಉದ್ಯಾವರ, ಶ್ರೇಯಸ್ ಮತ್ತಿತರರು ಉಪಸ್ಥಿತರಿದ್ದರು.