ಚಿಕ್ಕಮಗಳೂರುಅಸಾಂಕ್ರಾಮಿಕ ರೋಗಗಳ (ಎನ್ಸಿಡಿ) ತಪಾಸಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನವಾಗಿರುವುದು ಹೆಮ್ಮೆಯ ಸಂಗತಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು.
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಅಸಾಂಕ್ರಾಮಿಕ ರೋಗಗಳ (ಎನ್ಸಿಡಿ) ತಪಾಸಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನವಾಗಿರುವುದು ಹೆಮ್ಮೆಯ ಸಂಗತಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು.ನಗರದ ಜಿಪಂನಲ್ಲಿ ಶನಿವಾರ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಈ ಸಾಧನೆ ಸಾಧ್ಯ ಎಂದರು.
ಬಿಪಿ, ಹೈಪರ್ಟೆನ್ಷನ್ ಸೇರಿದಂತೆ ವಿವಿಧ ಅಸಾಂಕ್ರಾಮಿಕ ರೋಗಗಳ ಪತ್ತೆಗೆ ಸಮಗ್ರ ತಪಾಸಣೆ ನಡೆಸಲಾಗಿದೆ. ಈ ಕಾರ್ಯ ದಲ್ಲಿ ನಿರಂತರ ಶ್ರಮವಹಿಸಿದ ಜಿಲ್ಲೆಯ ಶಾಸಕರು, ಹಿರಿಯ ಅಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿ,ಆರೋಗ್ಯ ಇಲಾಖೆಯ ಸಂಪೂರ್ಣ ತಂಡವನ್ನು ಅಭಿನಂದಿಸುವುದಾಗಿ ತಿಳಿಸಿದರು.ಜಿಲ್ಲೆಯ ಎಲ್ಲ 88 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಲಭ್ಯವಿದ್ದು, ತಾಲೂಕು ಆಸ್ಪತ್ರೆಗಳಿಗೂ ಅಗತ್ಯ ವೈದ್ಯರ ನಿಯೋಜಿಸಲಾಗಿದೆ. ಶೃಂಗೇರಿ ತಾಲೂಕು ಆಸ್ಪತ್ರೆ ವೈದ್ಯರ ಕೊರತೆ ಶೀಘ್ರ ಸರಿಪಡಿಸ ಲಾಗುವುದು. ಜಿಲ್ಲಾ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆ ಮಾಡಿ ತಾಲೂಕು ಆಸ್ಪತ್ರೆ ಬಲಪಡಿಸಲು ಎಲ್ಲ ತಾಲೂಕು ಕೇಂದ್ರಗಳಲ್ಲಿ ಟೆಲಿ ಐಸಿ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದರು.ಡಿಸೆಂಬರ್ ಅಂತ್ಯಕ್ಕೆ ನೂತನ ಆಂಬ್ಯುಲೆನ್ಸ್ ವ್ಯವಸ್ಥೆ ಜಾರಿಗೆ ಬರಲಿದೆ. ತುರ್ತು ಕರೆ ಬಂದಾಗ 20 ನಿಮಿಷದಲ್ಲಿ ಆಂಬ್ಯುಲೆನ್ಸ್ ತಾಲೂಕು ಆಸ್ಪತ್ರೆ ತಲುಪಬೇಕು. ನಿಗದಿತ ಸಮಯದ ಸೇವೆಯಲ್ಲಿ ವಿಫಲವಾದರೆ ಸಂಬಂಧಪಟ್ಟ ಕಂಪನಿಗೆ ₹3,000 ದಂಡ ವಿಧಿಸಲಾಗುವುದು ಎಂದು ವಿವರಿಸಿದರು.ಗುತ್ತಿಗೆ ಆಧಾರದ ವೈದ್ಯರ ಖಾಯಂಗೆ ಮುಖ್ಯಮಂತ್ರಿ ಜತೆ ಚರ್ಚಿಸಿದ್ದು, ಖಾಲಿ ಇರುವ ಫಾರ್ಮಸಿಸ್ಟ್ ಹಾಗೂ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲಾಗುವುದು ಎಂದರು.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ) ದಿಂದ ನೀಡುವ ''''''''ಅರಿವು'''''''' ಶೈಕ್ಷಣಿಕ ಸಾಲ ಹಾಗೂ ವಿದ್ಯಾರ್ಥಿ ವೇತನವನ್ನು ನವೆಂಬರ್ ಅಂತ್ಯದ ವೇಳೆಗೆ ವಿತರಿಸಲಾಗುವುದು. ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ದೂರು ಸಲ್ಲಿಸಲು ಶೀಘ್ರ ಟೋಲ್ಫ್ರೀ ಸಂಖ್ಯೆ ಬಿಡುಗಡೆ ಮಾಡಲಾಗುವುದು ಎಂದರು.ಹಜ್ ಯಾತ್ರೆಯಂತೆ ಉಮ್ರಾ ಯಾತ್ರೆ ಕೈಗೊಳ್ಳುವವರ ಅನುಕೂಲಕ್ಕೆ ಹಜ್ ಭವನದ ಮೂಲಕ ಪ್ರತಿ ತಿಂಗಳು 2 ತಂಡ ಗಳಿಗೆ ಲಾಭ-ನಷ್ಟವಿಲ್ಲದ ಆಧಾರದಲ್ಲಿ ಪ್ರಯಾಣದ ವ್ಯವಸ್ಥೆ ಮಾಡಲಾಗುವುದು ಎಂದರು.ಸಭೆಯಲ್ಲಿ ಶಾಸಕರಾದ ಟಿ.ಡಿ. ರಾಜೇ ಗೌಡ, ಎಚ್.ಡಿ. ತಮ್ಮಯ್ಯ, ನಯನಾ ಮೋಟಮ್ಮ, ರಾಜ್ಯ ಪರಿಸರ ಮೌಲ್ಯಮಾಪನ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಎನ್. ಮಹೇಶ್, ವಿಪ ಸದಸ್ಯೆ ಗಾಯತ್ರಿ ಶಾಂತೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ. ಅಂಶುಮಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಫೋಟೋ:ಎನ್ಸಿಡಿ ತಪಾಸಣೆಯಲ್ಲಿ ಚಿಕ್ಕಮಗಳೂರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರನ್ನು ಸಚಿವ ಯು.ಟಿ. ಖಾದರ್ ಅಭಿನಂದಿಸಿದರು. ಈ ಶಾಸಕರಾದ ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಇದ್ದರು.