ಬೆಳಕು ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ವತಿಯಿಂದ ನೀಡಲಾಗುವ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿಗೆ ಮಡಿಕೇರಿ ತಾಲೂಕಿನ ಹಳೇ ತಾಲೂಕು ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆಯಾದ ಭಾಗ್ಯವತಿ ಸಿ.ಜೆ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಾಪೋಕ್ಲು: ಬೆಳಕು ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ವತಿಯಿಂದ ನೀಡಲಾಗುವ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿಗೆ ಮಡಿಕೇರಿ ತಾಲೂಕಿನ ಹಳೇ ತಾಲೂಕು ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆಯಾದ ಭಾಗ್ಯವತಿ ಸಿ.ಜೆ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸುತ್ತಿರುವ ಅನನ್ಯ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ಅವರು ತಿಳಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ 126ನೇ ಚಿಗುರು ಸಮ್ಮೇಳನ’ದ ವೇದಿಕೆಯಲ್ಲಿ ಭಾಗ್ಯವತಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. .