ರಾಜ್ಯ ಮಟ್ಟದ 39ನೇ ಹೊನಲು ಬೆಳಕಿನ ಪುರುಷ ಹಾಗೂ ಮಹಿಳೆಯರ ಖೋಖೋ ಚಾಂಪಿಯನ್‌ಶಿಪ್ ಪಂದ್ಯಾವಳಿಗೆ ತಿಪಟೂರಿನ ಕಲ್ಪತರು ಕ್ರೀಡಾಂಗಣ ಸರ್ವ ಸಜ್ಜಾಗಿದ್ದು ಗುರುವಾರದಿಂದ ಪಂದ್ಯಗಳು ಪ್ರಾರಂಭವಾಗಲಿದೆ. ರಾಷ್ಟ್ರದಲ್ಲಿಯೇ ದಾಖಲೆಯ 130 ತಂಡಗಳು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಲಿವೆ.
ಕನ್ನಡಪ್ರಭ ವಾರ್ತೆ ತಿಪಟೂರು
ರಾಜ್ಯ ಮಟ್ಟದ 39ನೇ ಹೊನಲು ಬೆಳಕಿನ ಪುರುಷ ಹಾಗೂ ಮಹಿಳೆಯರ ಖೋಖೋ ಚಾಂಪಿಯನ್‌ಶಿಪ್ ಪಂದ್ಯಾವಳಿಗೆ ತಿಪಟೂರಿನ ಕಲ್ಪತರು ಕ್ರೀಡಾಂಗಣ ಸರ್ವ ಸಜ್ಜಾಗಿದ್ದು ಗುರುವಾರದಿಂದ ಪಂದ್ಯಗಳು ಪ್ರಾರಂಭವಾಗಲಿದೆ. ರಾಷ್ಟ್ರದಲ್ಲಿಯೇ ದಾಖಲೆಯ 130 ತಂಡಗಳು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಲಿವೆ.ಡಿ.18ರಂದು ಉದ್ಘಾಟನಾ ಕಾರ್ಯಕ್ರಮದಲ್ಲಿ ರಂಗಾಪುರದ ಗುರುಪರದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಮಾಜಿ ಸಚಿವ ಬಿ.ಸಿ.ನಾಗೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಉಪಕಾರ್‌ಸಿಂಗ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಡಿ.19ರಂದು ಖೋಖೋ ಸಂಸ್ಥೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಗುರುಕುಲ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದ್ದು, ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಖೋಖೋ ಸಂಸ್ಥೆ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ ವಹಿಸಲಿದ್ದು, ಇಂಡಿಯಾ ಖೋಖೋ ಫೆಡರೇಷನ್ ಪ್ರಧಾನಕಾರ್ಯದರ್ಶಿ ಉಪಕಾರ್‌ಸಿಂಗ್, ಗೌರವಾಧ್ಯಕ್ಷ ಮಲ್ಲಿಕಾರ್ಜುನಯ್ಯ, ಗೋಪಾಲ್ ಮುಂತಾದವರು ಭಾಗವಹಿಸಲಿದ್ದಾರೆ.ಸಂಜೆ 6.39ಕ್ಕೆ ಕಲ್ಪತರು ಕ್ರೀಡಾಂಗಣದಲ್ಲಿ ನಡೆಯುವ ಸನ್ಮಾನ ಕಾರ್ಯಕ್ರಮದಲ್ಲಿ ತಮ್ಮಡಿಹಳ್ಳಿಯ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಮಹಾಸ್ವಾಮೀಜಿ, ಷಡಕ್ಷರ ಮಠದ ಶ್ರೀ ರುದ್ರಮುನಿಸ್ವಾಮೀಜಿ ಭಾಗವಹಿಸಲಿದ್ದಾರೆ. ಡಿ.20ರಂದು ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮಕ್ಕೆ ಗೃಹಸಚಿವ ಜಿ.ಪರಮೇಶ್ವರ್. ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜ್, ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಡಿ.21ರಂದು ಚಾಂಪಿಯನ್‌ಷಿಪ್ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಸಮಾರಂಭ ನಡೆಯಲಿದ್ದು ನೊಣವಿನಕೆರೆ ಶ್ರೀಕಾಡಸಿದ್ದೇಶ್ವರಮಠದ ಕರಿವೃಷಭದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲ್ಲಿದ್ದಾರೆ. ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ, ಕೆ.ಎಸ್.ಕೆಕೆ ಅಧ್ಯಕ್ಷ ಲೋಕೇಶ್ವರ್, ಕಾರ್ಯದರ್ಶಿ ರಾಮಲಿಂಗ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು.ಕರ್ನಾಟಕ ರಾಜ್ಯ ಖೋಖೋ ಸಂಸ್ಥೆ ಇತಿಹಾಸದಲ್ಲಿಯೇ ಐತಿಹಾಸಿಕ ಕಾರ್ಯಕ್ರಮವಾಗಿ ನಡೆಯಲಿದೆ.