ಸಾರಾಂಶ
ಬೆಳಗಾವಿ: ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಂಘದ ನಡೆಸಿದ ರಾಜ್ಯಮಟ್ಟದ ಟೆಬಲ್ ಟೆನಿಸ್ ಸಿಂಗಲ್ಸ್ ನಲ್ಲಿ ದ್ವಿತೀಯ ಸ್ಥಾನ ಪಡೆದ ಭಾಗ್ಯಶ್ರೀ ಪವಾರ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬೆಳಗಾವಿ: ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಂಘದ 2023-24ನೇ ಸಾಲಿನ ರಾಜ್ಯಮಟ್ಟದ ಟೆಬಲ್ ಟೆನಿಸ್ ಸಿಂಗಲ್ಸ್ ನಲ್ಲಿ ದ್ವಿತೀಯ ಸ್ಥಾನ ಪಡೆದ ಬೆಳಗಾವಿ ವಿಭಾಗದ ಶಿಕ್ಷಣ ಇಲಾಖೆ ಸಹನಿರ್ದೇಶಕರ ಕಚೇರಿಯ ವಿಭಾಗೀಯ ಕಾರ್ಯದರ್ಶಿಗಳ ಅಧೀಕ್ಷಕಿ ಭಾಗ್ಯಶ್ರೀ ಪವಾರ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆ.17, 18 ಹಾಗೂ 19ರಂದು ನಡೆದ ರಾಜ್ಯಮಟ್ಟದ ಕ್ರೀಡಾಕೂಟದ ಟೆಬಲ್ ಟೆನಿಸ್ ಸಿಂಗಲ್ಸ್ ನಲ್ಲಿ ಭಾಗ್ಯಶ್ರೀ ಪವಾರ ಉತ್ತಮ ಸಾಧನೆ ಮಾಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ರಾಷ್ಟ್ರ ಮಟ್ಟದ ಟೆಬಲ್ ಟೆನಿಸ್‌ಗೆ ಆಯ್ಕೆ ಆಗಿದ್ದಾರೆ. ಭಾಗ್ಯಶ್ರೀ ಪವಾರ ಅವರ ಸಾಧನೆಗೆ ಶಾಲಾ ಶಿಕ್ಷಣ ಇಲಾಖೆಯ ವಿಭಾಗೀಯ ಕಾರ್ಯದರ್ಶಿ ಹಾಗೂ ಪದನಿಮಿತ್ತ ಸಹನಿರ್ದೇಶಕ ಸಕ್ರೆಪ್ಪಗೌಡ ಬಿರಾದಾರ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.