ಸಾರಾಂಶ
ಕನ್ನಡಪ್ರಭ ವಾರ್ತೆ ಸೊರಬ
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ ಮತ್ತು ಸಿಬ್ಬಂದಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.20ರಂದು ಪಟ್ಟಣದ ಡಾ. ರಾಜ್ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ತಿಪ್ಪೇಸ್ವಾಮಿ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ನಗರ ಕೇಂದ್ರ ಗ್ರಂಥಾಲಯ ಶಿವಮೊಗ್ಗ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ರಾಜ್ಯಮಟ್ಟದ ಸಮಾರೋಪ ಮತ್ತು ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಯಶಸ್ವಿಗೊಳಿಸಿಕೊಡಲು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಸೊರಬ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ನ.20ರಂದು ಬೆಳಗ್ಗೆ ಓದಿನೆಡೆಗೆ ನಮ್ಮ ನಡಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮುಂಭಾಗದಿಂದ ಮುಖ್ಯಬೀದಿ ಮೂಲಕ ರಂಗಮಂದಿರವರೆಗೆ ಅದ್ಧೂರಿ ಮೆರವಣಿಗೆ ನಡೆಸಲಾಗುವುದು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಜಾಥಾಕ್ಕೆ ಚಾಲನೆ ಹಾಗೂ ಸಮಾರೋಪ ಸಮಾರಂಭ ಅಧ್ಯಕ್ಷತೆ ವಹಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಪುಸ್ತಕ ಪ್ರದರ್ಶನದ ಉದ್ಘಾಟನೆಯನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ ನೆರವೇರಿಸುವರು. ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಬಿ.ಕೆ. ಸಂಗಮೇಶ್ವರ, ಗೋಪಾಲಕೃಷ್ಣ ಬೇಳೂರು, ಶಾರದಾ ಪರ‍್ಯಾನಾಯ್ಕ, ಎಸ್.ಎನ್. ಚನ್ನಬಸಪ್ಪ, ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್. ಭೋಜೇಗೌಡ, ಎಸ್.ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್. ಅರುಣ್ ಭಾಗವಹಿಸುವರು.
ಉನ್ನತ ಶಿಕ್ಷಣ ಇಲಾಖೆ ಅಪರ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ ಸಿಂಗ್, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶಕುಮಾರ್ ಹೊಸಮನಿ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿ.ಪಂ. ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಎಸ್‌ಪಿ ಜಿ.ಕೆ. ಮಿಥುನ್‌ಕುಮಾರ್, ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಶ್ರಾಂತ ನಿರ್ದೇಶಕ ಟಿ.ಮಲ್ಲೇಶಪ್ಪ, ರಾಷ್ಟ್ರೀಯ ಗ್ರಂಥಾಲಯ ಕೋಲ್ಕತ್ತಾ ವಿಶ್ರಾಂತ ನಿರ್ದೇಶಕ ಡಾ. ಪಿ.ವೈ. ರಾಜೇಂದ್ರಕುಮಾರ್ ಹಾಗೂ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ ನಿಕಟಪೂರ್ವ ಅಧ್ಯಕ್ಷ ಡಾ. ಪಿ.ವಿ. ಕೊಣ್ಣೂರು ಸೇರಿದಂತೆ ಜಿಲ್ಲಾ ಮತ್ತು ತಾಲೂಕುಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸುವರು ಎಂದು ತಿಳಿಸಿದರು.ತಹಸೀಲ್ದಾರ್ ಹುಸೇನ್ ಸರಕಾವಸ್ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿದ್ದರು. ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ಹರೀಶ್, ಮುಖ್ಯ ಗ್ರಂಥಪಾಲಕ ಬಸವರಾಜ ಕೊಳ್ಳಿ, ತಾಲೂಕು ಸಹ ಗ್ರಂಥಪಾಲಕ ಟಿ.ಜಿ. ಕೃಷ್ಣಮೂರ್ತಿ ಮೊದಲಾದವರು ಸಭೆಯಲ್ಲಿ ಹಾಜರಿದ್ದರು.
- - - -17ಕೆಪಿಸೊರಬ01:ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆ ನಡೆಯಿತು.
;Resize=(128,128))
;Resize=(128,128))
;Resize=(128,128))
;Resize=(128,128))