ಸಾರಾಂಶ
ಪುತ್ತೂರು ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ೬ ನ್ಯಾಯಾಲಯಗಳಿಗೆ ಸಂಬಂಧಿಸಿದ ಒಟ್ಟು ೬೯೬೭ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ ಅದಾಲತ್‌ನಲ್ಲಿ ೧೫೧೨ ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಪ್ರಯತ್ನಿಸಲಾಗಿತ್ತು. ೯೮೬ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಒಟ್ಟು ಫಲಾನುಭವಿಗಳಿಗೆ ೨,೧೩,೦೫,೦೯೭ ರು. ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಯಿತು.
ಪುತ್ತುರು: ೬ ನ್ಯಾಯಾಲಯಗಳ ಒಟ್ಟು ೬೯೬೭ ಪ್ರಕರಣಗಳು
ಕನ್ನಡಪ್ರಭ ವಾರ್ತೆ ಪುತ್ತೂರುರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಪುತ್ತೂರು ಆಶ್ರಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಿನ್ನೆಲೆಯಲ್ಲಿ ಶನಿವಾರ ಪುತ್ತೂರಿನ ೫ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ಕಾರ್ಯ ಕಲಾಪ ನಡೆಯಿತು. ಈ ಕಲಾಪದಲ್ಲಿ ೯೮೬ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ಒಟ್ಟು ಫಲಾನುಭವಿಗಳಿಗೆ ೨,೧೩,೦೫,೦೯೭ ರು. ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಯಿತು.
ಪುತ್ತೂರು ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ೬ ನ್ಯಾಯಾಲಯಗಳಿಗೆ ಸಂಬಂಧಿಸಿದ ಒಟ್ಟು ೬೯೬೭ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ ಅದಾಲತ್‌ನಲ್ಲಿ ೧೫೧೨ ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಪ್ರಯತ್ನಿಸಲಾಗಿತ್ತು. ೯೮೬ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಒಟ್ಟು ಫಲಾನುಭವಿಗಳಿಗೆ ೨,೧೩,೦೫,೦೯೭ ರು. ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಯಿತು. ಲೋಕ್ ಅದಾಲತ್‌ನಲ್ಲಿ ಹಣಕಾಸು ಸಂಸ್ಥೆಗಳು, ಪೊಲೀಸ್, ಆರ್‌ಟಿಓ, ನಗರಸಭೆ ಅಧಿಕಾರಿಗಳು, ತಹಸೀಲ್ದಾರ್, ವಕೀಲರು, ಇನ್ಸೂರೆನ್ಸ್ ಕಂಪನಿಗಳಿಗೆ ಸಂಬಂಧಿಸಿದಂತೆ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಂಧಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು.ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ., ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದ ನ್ಯಾಯಾಧೀಶೆ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಪ್ರಕೃತಿ ಕಲ್ಯಾಣ್‌ಪುರ, ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ದೇವರಾಜ್ ವೈ.ಎಚ್., ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ವ್ಯವಹಾರಿಕ ನ್ಯಾಯಾಲಯದ ನ್ಯಾಯಾಧೀಶ ಶಿವಣ್ಣ ಎಚ್. ಆರ್., ಹೆಚ್ಚುವರಿ ವ್ಯವಹಾರಿಕ ನ್ಯಾಯಾಲಯದ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಸಂಧಾನ ಪ್ರಕ್ರಿಯೆ ನಡೆಸಲಾಯಿತು.ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ೫೧ ಪ್ರಕರಣಗಳಲ್ಲಿ ೭ ಪ್ರಕರಣಗಳನ್ನು ಇತ್ಯರ್ಥಪಡಿಸಿ ರು. ೧೭,೬೦,೦೦೦ ಪರಿಹಾರ ವಿತರಣೆಗೆ ಆದೇಶಿಲಾಗಿದೆ. ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯ ಮತ್ತು ಎಸಿಜೆಎಂನ ೩೦೦ ಪ್ರಕರಣಗಳಲ್ಲಿ ೨೬೦ ಪ್ರಕರಣಗಳನ್ನು ಇತ್ಯರ್ಥಪಡಿಸಿ ರು. ೯೪,೮೩,೧೫೦ ಪರಿಹಾರ ವಿತರಣೆಗೆ ಆದೇಶಿಲಾಗಿದೆ. ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿಯ ೩೫೨ ಪ್ರಕರಣಗಳಲ್ಲಿ೨೯೪ ಪ್ರಕರಣಗಳನ್ನು ಉತ್ಯರ್ಥಪಡಿಸಿ ರು. ೧೩,೫೦೦ ಪರಿಹಾರ ವಿತರಣೆಗೆ ಆದೇಶಿಲಾಗಿದೆ. ಪ್ರಧಾನ ವ್ಯವಹಾರಿಕ ನ್ಯಾಯಾಲಯ ಮತ್ತು ಜೆಎಂಎಫ್‌ಸಿನ ೩೯೩ ಪ್ರಕರಣಗಳಲ್ಲಿ ೪೨ ಪ್ರಕರಣಗಳನ್ನು ಇತ್ಯರ್ಥಪಡಿಸಿ ರು. ೪೪,೫೫,೦೧೬ ಪರಿಹಾರ ವಿತರಣೆಗೆ ಆದೇಶಿಸಲಾಗಿದೆ. ಹೆಚ್ಚುವರಿ ವ್ಯವಹಾರಿಕ ನ್ಯಾಯಾಲಯ ಮತ್ತು ಜೆಎಂಎಫ್‌ಸಿಯ ೧೪೬ ಪ್ರಕರಣಗಳಲ್ಲಿ ೧೩೩ ಪ್ರಕರಣಗಳನ್ನು ಇತ್ಯರ್ಥಪಡಿಸಿ ರು. ೫೫,೬೮,೮೩೧ ಪರಿಹಾರ ವಿತರಣೆಗೆ ಆದೇಶಿಲಾಗಿದೆ. ಎರಡನೇ ಹೆಚ್ಚುವರಿ ವ್ಯವಹಾರಿಕ ನ್ಯಾಯಾಲಯ ಮತ್ತು ಜೆಎಂಎಫ್‌ಸಿಯ ೨೭೦ ಪ್ರಕರಣಗಳಲ್ಲಿ ೨೫೦ ಪ್ರಕರಣಗಳನ್ನು ಇತ್ಯರ್ಥಪಡಿಸಿ ರು. ೨೪,೬೦೦ ಪರಿಹಾರ ವಿತರಣೆಗೆ ಆದೇಶಿಲಾಗಿದೆ.ಸಂಧಾನಕಾರ ನ್ಯಾಯವಾದಿಗಳಾಗಿ ಮಹಮ್ಮದ್ ರಿಯಾಝ್, ಮೋಹಿನಿ, ನಝೀರಾ, ಮಿಶ್ರಿಯಾ, ವಿಶಿಕಾ ಅವರನ್ನು ನಿಯೋಜಿಸಲಾಗಿತ್ತು.