ನಗರದ ತಾಲೂಕು ಕಾನೂನು ಸೇವಾ ಸಮಿತಿಯಿಂದ ಡಿಸೆಂಬರ್ ೧೩ ರಂದು ರಾಷ್ಟ್ರೀಯ ಲೋಕ ಅದಾಲತನ್ನು ನ್ಯಾಯಾಲಯದ ಪ್ರಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಐದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಂತ್ ಕುಮಾರ್ ಸಿ.ಆರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ನಗರದ ತಾಲೂಕು ಕಾನೂನು ಸೇವಾ ಸಮಿತಿಯಿಂದ ಡಿಸೆಂಬರ್ ೧೩ ರಂದು ರಾಷ್ಟ್ರೀಯ ಲೋಕ ಅದಾಲತನ್ನು ನ್ಯಾಯಾಲಯದ ಪ್ರಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಐದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಂತ್ ಕುಮಾರ್ ಸಿ.ಆರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿ ಸಂಧಾನದ ಮೂಲಕ ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದು ಬೃಹತ್ ವೇದಿಕೆಯ ಸುವರ್ಣ ಅವಕಾಶ ಎಂದು ತಿಳಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಜಿಲ್ಲಾ ಸದಸ್ಯ ಕಾರ್ಯದರ್ಶಿಗಳಾಗಿರುವ ನೂರುನ್ನಿಸಾ ಅವರು ಸದರಿ ಲೋಕ ಅದಾಲತ್ತುಗಳು ಜನಸಾಮಾನ್ಯರಿಗಾಗಿ ಇರುವಂತಹ ಉತ್ತಮ ವೇದಿಕೆಯಾಗಿದ್ದು ಇದರಲ್ಲಿ ಸೌಹಾರ್ದಯುತವಾಗಿ ರಾಜಿ ಸಂಧಾನದ ಮುಖಾಂತರ ಪ್ರಕರಣಗಳನ್ನು ಹೆಚ್ಚು ಕಾಲಾವಕಾಶ ತೆಗೆದುಕೊಳ್ಳದೆ ಇತ್ಯರ್ಥಪಡಿಸಿಕೊಳ್ಳಬಹುದು ಎಂಬುದಾಗಿ ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಆಗಿರುವ ಮಹಮ್ಮದ್ ಆರಿಫುಲ್ಲ ಸಿ. ಎಫ್ ಇವರು ಈ ರಾಷ್ಟ್ರೀಯ ಲೋಕ ಅದಾಲತ್‌ ನಲ್ಲಿ ಪ್ರಕರಣಗಳು ಹೆಚ್ಚು ಕಾಲಾವಕಾಶ ತೆಗೆದುಕೊಳ್ಳದೆ, ಸೌಹಾರ್ದಯುತವಾಗಿ ಮುಗಿಯಬೇಕು. ಪ್ರಕರಣಗಳನ್ನು ವಕೀಲರ ಮೂಲಕವಾಗಲಿ ಹಾಗೂ ವೈಯಕ್ತಿಕವಾಗಿ ಆಗಲಿ ಬಗೆಹರಿಸಿಕೊಳ್ಳಬಹುದು ಹಾಗೂ ಈ ಲೋಕ ಅದಾಲತ್ ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳನ್ನು ಯಾವುದೇ ಶುಲ್ಕವಿಲ್ಲದೆ ಕಡಿಮೆ ಕಾಲಾವಕಾಶದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಭರತ್ ಚಂದ್ರ, ಅಧಿಕ ಸಿವಿಲ್ ನ್ಯಾಯಾಧೀಶೆ ಮಧುಶ್ರೀ ಜಿ.ಎಸ್. ತಾಲೂಕು ವಕೀಲರ ಸಂಘ ಅಧ್ಯಕ್ಷರಾದ ಬಿ.ಎನ್ ಅಜಯ್, ಕಾರ್ಯದರ್ಶಿಗಳಾದ ಬಿ ಮಲ್ಲಿಕಾರ್ಜುನಯ್ಯ, ಮತ್ತು ವಕೀಲರ ಸಂಘದ ಎಲ್ಲಾ ಸದಸ್ಯ ವಕೀಲರು ಹಾಜರಿದ್ದರು.