ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಖುದ್ದಾಗಿ ಆನ್-ಲೈನ್ ಅಥವಾ ವೀಡಿಯೋ ಕಾನ್ಸೆರೆನ್ಸ್ ಅಥವಾ ಇ-ಮೇಲ್ ಅಥವಾ ವಾಟ್ಸ್ ಆಪ್ ಅಥವಾ ಎಲೆಕ್ಟ್ರಾನಿಕ್ ಮೋಡ್ ಮೂಲಕ ಸಂಪರ್ಕಿಸಿ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ಅದಾಲತ್‌ನಲ್ಲಿ ಭಾಗಿಯಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಆರ್.ಮಹೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀ ಸಂಧಾನ ಮೂಲಕ ಪ್ರಕರಣ ಇತ್ಯರ್ಥಪಡಿಸಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಆನ್-ಲೈನ್ ಅಥವಾ ವೀಡಿಯೋ ಕಾನ್ವರೆನ್ಸ್ ಅಥವಾ ಇಮೇಲ್ ಮುಖಾಂತರ e-malli tiscpandavapura@gmail.com ಅಥವಾ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕೆಂದು ತಿಳಿಸಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಖುದ್ದಾಗಿ ಆನ್-ಲೈನ್ ಅಥವಾ ವೀಡಿಯೋ ಕಾನ್ಸೆರೆನ್ಸ್ ಅಥವಾ ಇ-ಮೇಲ್ ಅಥವಾ ವಾಟ್ಸ್ ಆಪ್ ಅಥವಾ ಎಲೆಕ್ಟ್ರಾನಿಕ್ ಮೋಡ್ ಮೂಲಕ ಸಂಪರ್ಕಿಸುವಂತೆ ಕೋರಿದರು.

ಪ್ರತಿದಿನ ಪಟ್ಟಣದ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ -ಅದಾಲತ್‌ ಸಂಬಂಧಿಸಿದಂತೆ ಪೂರ್ವಾಭಾವಿ ಬೈಠಕ್ ಅಥವಾ ಪೀಠಗಳು ನಡೆಯಲಿವೆ. ನೀರಿನ ಬಿಲ್ ಪಾವತಿ, ಟೆಲಿಫೋನ್ ಬಿಲ್, ವಿದ್ಯುತ್ ಬಿಲ್ ಹಾಗೂ ಸಣ್ಣಪುಟ್ಟ ಬ್ಯಾಂಕ್ ಸಾಲ ವಸೂಲಾತಿ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ವ್ಯಾಜ್ಯ ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿ ಮುಖಾಂತರ ವಿಶೇಷ ಪೀಠ ನಡೆಯಲಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ ನ್ಯಾ.ಬಿ.ಪಾರ್ವತಮ್ಮ, ಕಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಬಾಬು, ವಕೀಲರ ಸಂಘದ ತಾಲೂಕು ಅಧ್ಯಕ್ಷ ಗಂಗರಾಜು, ಕಾರ್ಯದರ್ಶಿ ಮೋಹನ್ ಇತರರಿದ್ದರು.

ಕವಿಗೋಷ್ಠಿ: ನೋಂದಣಿಗೆ ಆಹ್ವಾನ

ಮಂಡ್ಯ: ಕರುನಾಡ ಸಿರಿ ಸಂಪದ ಸಾಹಿತ್ಯ ಸಾಂಸ್ಕೃತಿಕ ಟ್ರಸ್ಟ್‌ನಿಂದ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಡ್ಯದ ಗಾಂಧಿ ಭವನದಲ್ಲಿ ೧೩ ಡಿಸೆಂಬರ್ ೨೦೨೫ ರಂದು ಕವಿ-ಕಾವ್ಯ ಸಮ್ಮಿಲನ, ಕವಿಗೋಷ್ಠಿ, ಸಾಧಕರಿಗೆ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ, ಸಾಧಕರು, ಕವಿಗೋಷ್ಠಿಯಲ್ಲಿ ಭಾಗವಹಿಸುವವರು ಹೆಸರು ವಿವರಗಳೊಂದಿಗೆ ಕಟ್ಟೆ ಎಂ.ಎಸ್.ಕೃಷ್ಣಸ್ವಾಮಿ, ಸಂಸ್ಥಾಪಕ ಅಧ್ಯಕ್ಷರು, ಮೊ: ೮೦೭೩೭೮೨೫೬೪ ಸಂಪರ್ಕಿಸುವಂತೆ ಕೋರಲಾಗಿದೆ.