ರಾಷ್ಟ್ರೀಯ ಪೋಷಣ್ ಅಭಿಯಾನ ಮಹತ್ತರ ಕಾರ್ಯಕ್ರಮ: ಜಿಗಣೇಹಳ್ಳಿ ನೀಲಕಂಠಪ್ಪ

| Published : Oct 10 2025, 01:00 AM IST

ಸಾರಾಂಶ

ಕಡೂರು, ಅಪೌಷ್ಟಿಕತೆ ನಿವಾರಿಸುವಲ್ಲಿ ಕೇಂದ್ರ ಸರಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನ ಮಹತ್ತರ ಕಾರ್ಯಕ್ರಮ ಎಂದು ಜಿಗಣೇಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ತಿಳಿಸಿದರು.

ಕನ್ನಡ ಪ್ರಭ ವಾರ್ತೆ, ಕಡೂರು

ಅಪೌಷ್ಟಿಕತೆ ನಿವಾರಿಸುವಲ್ಲಿ ಕೇಂದ್ರ ಸರಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನ ಮಹತ್ತರ ಕಾರ್ಯಕ್ರಮ ಎಂದು ಜಿಗಣೇಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ತಿಳಿಸಿದರು.

ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಸೋಮವಾರ ಜಿಗಣೇಹಳ್ಳಿ ಮತ್ತು ದೊಡ್ಡಪಟ್ಟಣಗೆರೆ ಗ್ರಾಪಂ ವ್ಯಾಪ್ತಿಯಡಿ ಸಿಡಿಪಿಒ ಇಲಾಖೆಯಿಂದ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ತಮ್ಮ ಮಕ್ಕಳ ಆರೋಗ್ಯದ ಕಾಳಜಿ ವಹಿಸಲು ಪೋಷಣ್ ಅಭಿಯಾನ ಹೆಚ್ಚು ಸಹಕಾರಿಯಾಗಲಿದೆ. ಕಾಲಕಾಲಕ್ಕೆ ಸಮತೋಲನದ ಆಹಾರ ಪದ್ಧತಿಗಳು ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಅಂಗನವಾಡಿ ಸಹಾಯಕಿಯರು ಹೆಚ್ಚು ಒತ್ತುಕೊಟ್ಟು ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದರು.ಬಾಲಕಿಯರಿಂದ ಹಿಡಿದು ಗರ್ಭೀಣಿ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸುವ ಕಾರ್ಯಕ್ರಮ ಇದಾಗಿದೆ. ಇಲಾಖೆ ಸವಲತ್ತುಗಳನ್ನು ಮಹಿಳೆಯರು ಪಡೆದುಕೊಳ್ಳಬೇಕಿದೆ. ಗ್ರಾಮದಲ್ಲಿ ಆರೋಗ್ಯಯುತ ಸಮಾಜ ನಿರ್ಮಿಸಲು ಅಂಗನವಾಡಿ ಸಹಾಯಕಿಯರ ಪಾತ್ರ ಪ್ರಮುಖ. ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು. ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಕೆ.ಮುಬಿನಾ, ಗ್ರಾಪಂ ಮಾಜಿ ಅಧ್ಯಕ್ಷೆ ಸುನಂದಾ ನೀಲಕಂಠಪ್ಪ, ಭಾರತಿ, ಅಂಗನವಾಡಿ ಕೇಂದ್ರದ ಸಹಾಯಕಿಯರಾದ ಮಂಜುಳಾ, ಸುಮಾ, ಶಾರದಮ್ಮ, ಗೌರಮ್ಮ, ಸುಶೀಲಮ್ಮ, ಶಾಂತಮ್ಮ ಹಾಗೂ ಗ್ರಾಮಸ್ಥರು ಇದ್ದರು.9 ಕೆಡಿಆರ್2 ಕಡೂರು ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನದ ಕಾರ್ಯಕ್ರಮವನ್ನು ಗ್ರಾಪಂ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಉದ್ಘಾಟಿಸಿದರು. ಕೆ.ಮುಬಿನಾ, ಭಾರತಿ, ಮಂಜುಳಾ, ಸುಮಾ ಮತ್ತಿತರಿದ್ದರು.