ಸಾರಾಂಶ
ಕನ್ನಡ ಪ್ರಭ ವಾರ್ತೆ ಗುಬ್ಬಿ
ಮಹಿಳೆಯರು ಸಬಲೀಕರಣ ಹೊಂದಿದಾಗ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯವಾಗಲಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ದಯಾಶೀಲಾ ತಿಳಿಸಿದರು.ತಾಲೂಕಿನ ನಿಟ್ಟೂರಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿದ್ದ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಸಿ ಮಾತನಾಡಿದ ಅವರು, ನಮ್ಮ ಸಂಸ್ಥೆಯು ಸಾಮಾಜಿಕವಾಗಿ, ಧಾರ್ಮಿಕವಾಗಿ, ಆರ್ಥಿಕವಾಗಿ ಸಮಾಜಕ್ಕೆ ಬಲ ತುಂಬಬೇಕು ಎಂಬ ಹಿನ್ನೆಲೆಯಲ್ಲಿ ನಿರಂತರವಾಗಿ ಕೆಲಸವನ್ನು ಮಾಡುತ್ತ ಬರುತ್ತಿದೆ. ತುಮಕೂರು ಜಿಲ್ಲೆಯಲ್ಲಿಯೂ ಕೂಡ ಲಕ್ಷಾಂತರ ಮಹಿಳೆಯರು ಧರ್ಮಸ್ಥಳ ಸಂಸ್ಥೆಯ ಜೊತೆಯಲ್ಲಿದ್ದು, ಸಾವಿರಾರು ಜನರಿಗೆ ಉದ್ಯೋಗದ ಅವಕಾಶವನ್ನು ನೀಡಿದ್ದೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 40ಕ್ಕೂ ಹೆಚ್ಚು ಮಹಿಳಾ ತರಬೇತಿ ಪಡೆದ ಸದಸ್ಯರಿಗೆ ಪ್ರಮಾಣ ಪತ್ರ ನೀಡಲಾಯಿತು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳ ಗೌರಮ್ಮ, ಹಸೀನಾ ತಾಜ್, ಗುಹೆಶ್ವರ ಸಮುದಾಯ ಭವನ ಅಧ್ಯಕ್ಷ ಜಗದೀಶ್, ತಾಲೂಕು ಯೋಜನಾಧಿಕಾರಿ ರಾಜೇಶ್ ಎಸ್., ಟೈಲರಿಂಗ್ ತರಬೇತಿ ಶಿಕ್ಷಕಿ ತೇಜಾವತಿ ಹಾಗೂ ಸೀರೆ ಕುಚ್ಚು ತರಬೇತಿ ಶಿಕ್ಷಕಿ ನಂದಿನಿ, ನೀರು ಉಳಿಸಿ ಕಾರ್ಯಕ್ರಮದ ಮೇಲ್ವಿಚಾರಕ ಕೇಶವ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪ್ರೇಮಾ, ವಲಯದ ಮೇಲ್ವಿಚಾರಕಿ ಇಂದ್ರಮ್ಮ ಹಾಗೂ ತರಬೇತಿ ಪಡೆದ ಸರ್ವ ಸದಸ್ಯರು ಉಪಸ್ಥಿತರಿದ್ದರು.