ಕನ್ನಡಪ್ರಭ ವಾರ್ತೆ ನಾಪೋಕ್ಲು
ಸಾಂಸ್ಕೃತಿಕ ಕಾವ್ಯೋತ್ಸವ ಸಂಭ್ರಮದ ಅಂಗವಾಗಿ ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಷ್ಟ್ರೀಯ ಪ್ರಶಸ್ತಿ, ಶನಿವಾರ ಸಂತೆಯ ಸಾಹಿತಿ ಶ.ಗ.ನಯನತಾರ ಅವರಿಗೆ ರಾಷ್ಟ್ರೀಯ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಜನ ಸೇವಾ ಫೌಂಡೇಶನ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಅಲೆಯನ್ಸ್ ಇಂಟರ್ನ್ಯಾಷನಲ್ ಸಂಸ್ಥೆ ಮೈಸೂರು ಸಹಯೋಗದಲ್ಲಿ ಸಾಂಸ್ಕೃತಿಕ ಕಾವ್ಯೋತ್ಸವ ಸಂಭ್ರಮದ ಅಂಗವಾಗಿ ಸಾಧಕರನ್ನು ಗೌರವಿಸಲಾಯಿತು. ವೇದಮೂರ್ತಿ ಡಾ. ಕಾಡಯ್ಯ ಹಿರೇಮಠ ಸ್ವಾಮಿಗಳ ಸಾನ್ನಿಧ್ಯದಲ್ಲಿ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಳದಂಡಿ, ಸಿ.ಜಿ. ಗಂಗಾಧರ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷರು, ಮಡ್ಡಿಕೆರೆ ಗೋಪಾಲ್, ಅಧ್ಯಕ್ಷರು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪತ್ರಕರ್ತ ಡಾ. ಮಂಜುನಾಥ ಎಸ್ ಶಿವಕ್ಕನವರ್ ಸಂಸ್ಥಾಪಕರು ಚಿರಾಯು ಕನ್ನಡ ವಾಹಿನಿ ಮತ್ತು ವಿಜಯ ಕರ್ನಾಟಕ ವರದಿಗಾರರು ಡಾಕ್ಟರ್ ನಾಗರಾಜ್ ವಿ ಭೈರಿ ಅವರು ಅಧ್ಯಕ್ಷರು ಕರ್ನಾಟಕ ಸುಗಮ ಸಂಗೀತ ಪರಿಷತ್ ಹಾಗೂ ನಿರ್ದೇಶಕರು ಅಲೆಯನ್ಸ್ ಇಂಟರ್ನ್ಯಾಷನಲ್ ಸಂಸ್ಥೆ ಮೈಸೂರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.ಸಾಹಿತಿ ಶ. ಗ. ನಯನತಾರಾಗೆ ರಾಷ್ಟ್ರೀಯ ಸಾಹಿತ್ಯ ರತ್ನ ಪ್ರಶಸ್ತಿ
ಸಾಂಸ್ಕೃತಿಕ ಕಾವ್ಯೋತ್ಸವ ಸಂಭ್ರಮದ ಅಂಗವಾಗಿ ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಷ್ಟ್ರೀಯ ಪ್ರಶಸ್ತಿ, ಶನಿವಾರ ಸಂತೆಯ ಸಾಹಿತಿ ಶ.ಗ.ನಯನತಾರ ಅವರಿಗೆ ರಾಷ್ಟ್ರೀಯ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.