ಸಾರಾಂಶ
ಕಲ್ಕೆರೆ ಗ್ರಾಮದ ಶ್ರೀ ರಾಘವೇಂದ್ರ ಅಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಮಕ್ಕಳಿಂದ ವಸ್ತು ಪ್ರದರ್ಶನ ನಡೆಯಿತು. ಭಾರತ ದೇಶ ವಿಜ್ಞಾನ ಕ್ಷೇತ್ರದಲ್ಲಿ ಇಡೀ ವಿಶ್ವದಲ್ಲೇ ವಿವಿಧ ತಂತ್ರಜ್ಞಾನ ಪ್ರಯೋಗಗಳಿಂದ ಮುನ್ನುಗುತ್ತಿದ್ದು, ಇದಕ್ಕೆ ಇಸ್ರೋನ ಚಂದ್ರಯಾನವೇ ಸಾಕ್ಷಿಯಾಗಿದೆ. ಮಕ್ಕಳಿಗೆ ವಿಜ್ಞಾನ ಕ್ಷೇತ್ರದ ಬಗ್ಗೆ ಹೆಚ್ಚು ಮಾಹಿತಿ ನೀಡಿದರೆ ಅವರ ಮುಂಬರುವ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೆ. ಟಿ. ಕುಮಾರ್ ಹೇಳಿದರು.
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಹೋಬಳಿಯ ಕಲ್ಕೆರೆ ಗ್ರಾಮದ ಶ್ರೀ ರಾಘವೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಮಕ್ಕಳಿಂದ ವಸ್ತು ಪ್ರದರ್ಶನ ನಡೆಯಿತು.ಶ್ರೀ ರಾಘವೇಂದ್ರ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಕೆ. ಟಿ. ಕುಮಾರ್ ಮಾತನಾಡಿ, ಪ್ರತಿ ವರ್ಷವೂ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚು ಮಾಡಲು ಹಲವು ಶೈಕ್ಷಣಿಕ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬರಲಾಗುತ್ತಿದೆ ಎಂದರು.
ಭಾರತ ದೇಶ ವಿಜ್ಞಾನ ಕ್ಷೇತ್ರದಲ್ಲಿ ಇಡೀ ವಿಶ್ವದಲ್ಲೇ ವಿವಿಧ ತಂತ್ರಜ್ಞಾನ ಪ್ರಯೋಗಗಳಿಂದ ಮುನ್ನುಗುತ್ತಿದ್ದು, ಇದಕ್ಕೆ ಇಸ್ರೋನ ಚಂದ್ರಯಾನವೇ ಸಾಕ್ಷಿಯಾಗಿದೆ. ಮಕ್ಕಳಿಗೆ ವಿಜ್ಞಾನ ಕ್ಷೇತ್ರದ ಬಗ್ಗೆ ಹೆಚ್ಚು ಮಾಹಿತಿ ನೀಡಿದರೆ ಅವರ ಮುಂಬರುವ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.ಗ್ರಾಮ ಪಂಚಾಯಿತಿ ಸದಸ್ಯ ಕೆ.ಎಸ್. ವಾಸುದೇವ್ ಮಾತನಾಡಿ, ಶ್ರೀ ರಾಘವೇಂದ್ರ ವಿದ್ಯಾಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ಕಲ್ಕೆರೆ ಗ್ರಾಮದಲ್ಲಿ ಈ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳ ಬಗ್ಗೆಯೂ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ. ವಿಜ್ಞಾನ ಕ್ಷೇತ್ರದ ಬಗ್ಗೆ ಮಕ್ಕಳಿಗೆ ಹೆಚ್ಚಿನ ಅರಿವು ಮೂಡಿಸುವುದರಿಂದ ಅವರಲ್ಲಿ ವಿಜ್ಞಾನ ಕ್ಷೇತ್ರದ ಬಗ್ಗೆ ಹೆಚ್ಚು ಆಸಕ್ತಿ ಮೂಡುತ್ತದೆ ಎಂದರು.
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನಕ್ಕೆ ಸಂಬಂಧಪಟ್ಟ ವಿವಿಧ ಕಲಾ ಕೃತಿಗಳು ಸಾರ್ವಜನಿಕರ ಹಾಗೂ ಪೋಷಕರ ಗಮನ ಸೆಳೆದವು. 2025ನೇ ಸಾಲಿನ ಶೈಕ್ಷಣಿಕ ವರ್ಷದ ಅಂಗವಾಗಿ ಶಾಲಾ ಮಕ್ಕಳು ಮತ್ತು ಪೋಷಕರು ಸರಸ್ವತಿ ಪೂಜೆಯಲ್ಲಿ ಭಾಗವಹಿಸಿ ಸರಸ್ವತಿ ದೇವಿಗೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಲ್ಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹೋಟೆಲ್ ಡಿ. ಎನ್. ಮಂಜುನಾಥ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಕೆಎಸ್ ಬೈರೇಗೌಡ, ಮುಖ್ಯ ಶಿಕ್ಷಕಿ ಸಿ. ಸಿ. ಹೇಮಾವತಿ, ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಹಾಗೂ ಪೋಷಕರು ಮತ್ತು ಮಕ್ಕಳು ಹಾಜರಿದ್ದರು.