ಸಾರಾಂಶ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಕರ ಬದುಕನ್ನು ರೂಪಿಸಿಕೊಳ್ಳುವಲ್ಲಿ ವ್ಯಕ್ತಿತ್ವ ವಿಕಸನ ಮಹತ್ವದ ಪಾತ್ರ ವಹಿಸುತ್ತದೆ.
ಅಂಕೋಲಾ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಕರ ಬದುಕನ್ನು ರೂಪಿಸಿಕೊಳ್ಳುವಲ್ಲಿ ವ್ಯಕ್ತಿತ್ವ ವಿಕಸನ ಮಹತ್ವದ ಪಾತ್ರ ವಹಿಸುತ್ತದೆ. ಎನ್‌ಎಸ್‌ಎಸ್ ನಂತಹ ಸಂಘಟನೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಪ್ರಜ್ಞೆ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ನಿವೃತ್ತ ಗ್ರಂಥಪಾಲಕ ಮಹಾಂತೇಶ ರೇವಡಿ ಹೇಳಿದರು.
ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.ಗೋಪಶಿಟ್ಟಾ ವಲಯ ಅರಣ್ಯಾಧಿಕಾರಿ ವಿ.ಪಿ. ನಾಯ್ಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪರಿಸರ ಉಳಿದರೆ ನಾವು ಉಳಿಯುತ್ತೇವೆ. ಪರಿಸರ ಜಾಗೃತಿಯ ಕಾರ್ಯದಲ್ಲಿ ನಮ್ಮ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಯುವಕರಲ್ಲಿ ಕರೆ ನೀಡಿದರು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿವಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುನೀಲದತ್ತ ಗಾಂವಕರ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಉತ್ಸುಕರಾಗಿ ಎನ್‌ಎಸ್‌ಎಸ್‌ನಂತಹ ಸಂಘಟನೆಗಳ ಮೂಲಕ ಸೇವಾ ಮನೋಭಾವ ಹೆಚ್ಚಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ವಿನೋದ ನಾಯ್ಕ ಸ್ವಾಗತಿಸಿದರು. ಶಿಬಿರದ ಸಂಯೋಜಕಿ, ಉಪನ್ಯಾಸಕಿ ಪ್ರಿಯಾಂಕ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಾಘವೇಂದ್ರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಗ್ರಾಪಂ ಅಧ್ಯಕ್ಷೆ ಸುಧಾ ನಾಯ್ಕ ಉಪಸ್ಥಿತರಿದ್ದರು. ಉಪನ್ಯಾಸಕಿ ರೂಪಾ ಕುಡ್ತರಕರ ವಂದಿಸಿದರು.