ಸಾರಾಂಶ
ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ 50 ವಿದ್ಯಾರ್ಥಿಗಳು ಭಾಗವಹಿಸಿದರು. ಕ್ಲಾಸಿಕ್ ಮತ್ತು ಫೋಕ್ ನೃತ್ಯಗಳು ನಡೆದವು.
ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ
ಗೋವಾದಲ್ಲಿ ನಡೆಯುತ್ತಿರುವ ಹತ್ತನೇ ವರ್ಷದ ರಾಷ್ಟ್ರೀಯ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಗೋಣಿಕೊಪ್ಪದ ಸೈಕ್ಲೋನ್ ನೃತ್ಯ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು.ಮಾರ್ಗೋ ರವೀಂದ್ರ ಭವನ ಸಭಾಂಗಣದಲ್ಲಿ ನಡೆಯುವ ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ 50 ವಿದ್ಯಾರ್ಥಿಗಳು ಭಾಗವಹಿಸಿದರು.
ಮೊದಲ ದಿನದ ಕಾರ್ಯಕ್ರಮದಲ್ಲಿ ಕ್ಲಾಸಿಕ್ ಮತ್ತು ಫೋಕ್ ನೃತ್ಯಗಳು ನಡೆದವು.ಗೋವಾದ ಸ್ಪೋರ್ಟ್ಸ್ ಅಸೋಸಿಯೇಷನ್, ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಶನ್ ಆಫ್ ಇಂಡಿಯಾ, ಏಷ್ಯನ್ ಸ್ಪೋರ್ಟ್ಸ್ ಡ್ಯಾನ್ಸ್ , ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಫೆಡರೇಶನ್, ಅಂತರರಾಷ್ಟ್ರೀಯ ನೃತ್ಯ ಮಂಡಳಿ, ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ, ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ಸ್ಪೋರ್ಟ್ ಸೈನ್ಸ್ ಮತ್ತು ಫಿಸಿಕಲ್ ಎಜುಕೇಶನ್ ಸಹಯೋಗದಲ್ಲಿ ನಡೆಯಿತು. ನೃತ್ಯ ತರಬೇತುದಾರ ಸೈಕ್ಲೋನ್ ರಮೇಶ್, ವಿದ್ಯಾರ್ಥಿಗಳು, ಪೋಷಕರು ಇದ್ದರು.