ಕಾಪು ಸರ್ಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

| Published : Sep 02 2025, 12:00 AM IST

ಕಾಪು ಸರ್ಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗ ಮತ್ತು ಐಕ್ಯೂಎಸಿ ವಿಭಾಗದ ಆಶ್ರಯದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕಾಪು

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗ ಮತ್ತು ಐಕ್ಯೂಎಸಿ ವಿಭಾಗದ ಆಶ್ರಯದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ವೇಟ್‌ಲಿಫ್ಟರ್ ಮತ್ತು ಬಾಡಿ ಬಿಲ್ಡರ್ ಅಶ್ವಿನ್‌ ಸನಿಲ್‌ ಆಗಮಿಸಿದ್ದರು.

ಅವರು ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೇಹ ಮತ್ತು ಆರೋಗ್ಯವಾಗಿರುತ್ತದೆ ಹಾಗೂ ದುಶ್ಚಟಗಳಿಂದ ದೂರವಿರಿಸುತ್ತದೆ ಎಂದು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ಗಾಂವ್ಕರ್‌ ಗೋಪಾಲಕೃಷ್ಣ ಎಂ. ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸುವುದರಿಂದ ಆರೋಗ್ಯವನ್ನು ಹಾಗೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬಹುದು ಎಂದರು.ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕ ಡಾ. ರೋಶ್ನಿ ಯಶವಂತ್‌, ಕ್ರೀಡಾ ಕಾರ್ಯದರ್ಶಿ ಅಶ್ವಿನಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಸವಿತಾ ಸ್ವಾಗತಿಸಿದರು. ಮನೀಷ ಕಾರ್ಯಕ್ರಮ ನಿರೂಪಿಸಿದರು. ದಿಯಾ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ವೃಂದ, ಕಚೇರಿ ಸಿಬ್ಬಂದಿ, ವಿದ್ಯಾರ್ಥಿಯರು ಉಪಸ್ಥಿತರಿದ್ದರು.