ಮಲೆನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾಧನೆಗೆ ರಾಷ್ಟ್ರಮಟ್ಟದ ಮನ್ನಣೆ ದೊರತಿದೆ. ಹೊಸನಗರ ತಾಲೂಕಿನ ಹುಂಚದ ಸಮಟಗಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ರತ್ನಕುಮಾರಿ ಎಸ್ ಅವರಿಗೆ 2026 ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಪ್ರದಾನ ಮಾಡಿದರು.

ಕನ್ನಡಪ್ರಭ ವಾರ್ತೆ ರಿಪ್ಪನ್‍ಪೇಟೆ

ಮಲೆನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾಧನೆಗೆ ರಾಷ್ಟ್ರಮಟ್ಟದ ಮನ್ನಣೆ ದೊರತಿದೆ. ಹೊಸನಗರ ತಾಲೂಕಿನ ಹುಂಚದ ಸಮಟಗಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ರತ್ನಕುಮಾರಿ ಎಸ್ ಅವರಿಗೆ 2026 ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಪ್ರದಾನ ಮಾಡಿದರು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

2026ರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ದೇಶಾದ್ಯಂತ ಆಯ್ಕೆಯಾದ 48 ಶಿಕ್ಷಕರಲ್ಲಿ ಕರ್ನಾಟಕದಿಂದ ರತ್ನಕುಮಾರಿ ಎಸ್ ಕೂಡ ಒಬ್ಬರಾಗಿದ್ದು, ಕರ್ನಾಟಕ ರಾಜ್ಯ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶದ ಸಮಟಗಾರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಕೈಕ ಶಿಕ್ಷಕಿ ಎಂಬುದು ವಿಶೇಷ ಗೌರವಕ್ಕೂ ಪಾತ್ರರಾಗಿರುವುದು ಹೆಮ್ಮೆಯ ವಿಚಾರ.

ಸುಮಾರು 30 ವರ್ಷಗಳ ಬೋಧನೆ ಸೇವೆ ಸಲ್ಲಿಸಿರುವ ಅವರು 24 ವರ್ಷಗಳಿಂದ ಸಮಟಗಾರು ಶಾಲೆಯಲ್ಲೇ ಮಕ್ಕಳ ಶಿಕ್ಷಣಕ್ಕಾಗಿ ಸಮಿರ್ಪಿತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪರಿಸರದೊಂದಿಗೆ ಪಾಠ ಆಟದ ಮೂಲಕ ಕಲಿಕೆ, ಇನ್ನಿತರ ಚಟುವಟಿಕೆ ಆಧಾರಿತ ಬೋಧನೆ ಹಾಗೂ ಇಂಗ್ಲಿಷ್ ಸಂವಹನ ಕೌಶಲ್ಯ ಬೆಳಸುವ ನವನವೀನ ಶಿಕ್ಷಣ ವಿಧಾನಗಳನ್ನು ಯಶಸ್ವಿಯಾಗಿ ತಮ್ಮ ಶಾಲೆಯಲ್ಲಿ ಅಳವಡಿಸಿಕೊಂಡಿದ್ದಾರೆ.