ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುನಗರದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎನ್.ಸಿ.ಸಿ, ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಯೂತ್ ರೆಡ್ ಕ್ರಾಸ್, ಐಕ್ಯೂಎಸಿ ಘಟಕ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ರಾಷ್ಟ್ರೀಯ ಮತದಾರರ ದಿನವನ್ನು ಗುರುವಾರ ಆಚರಿಸಲಾಯಿತು.
ಈ ವೇಳೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಬಿ.ಟಿ. ರಘು ಮಾತನಾಡಿ, ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶ ಹಾಗೂ ಹೊಸ ಮತದಾರರನ್ನು ನೋಂದಣಿ ಮಾಡಿಸುವ ಉದ್ದೇಶದಿಂದ ಈ ದಿನವನ್ನ ದೇಶದಾದ್ಯಂತ ಆಚರಿಸಲಾಗುತ್ತಿದೆ ಎಂದರು.ಪ್ರತಿಯೊಬ್ಬ ಮತದಾರನು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಅನುಸರಿಸಿ ಕಾಪಾಡುವ ಉದ್ದೇಶದಿಂದ ಜಾಗೃತನಾಗಿ ಮತದಾನದ ಹಕ್ಕನ್ನು ಬಳಸಿಕೊಳ್ಳಬೇಕು. ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ರಾಜಕೀಯ ಪ್ರಕ್ರಿಯೆಗಳಲ್ಲಿ ಹೆಚ್ಚಾಗಿ ಭಾಗವಹಿಸಿದರೆ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೇ ಶ್ರೇಷ್ಠ ಮತದಾನದ ಹಕ್ಕನ್ನು ಬಳಸಿಕೊಂಡು ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳು ನಡೆಯಲು ಸಹಕರಿಸಬೇಕು ಎಂದು ಅವರು ತಿಳಿಸಿದರು.
ಇದೇ ವೇಳೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್. ಮರೀಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಬಿ.ಎಸ್. ಶ್ರೀಹರ್ಷ, ಅಧ್ಯಾಪಕ ಸಲಹೆಗಾರರಾದ ಪ್ರೊ.ಡಿ. ಪಲ್ಲವಿ, ಎನ್ಎಸ್ಎಸ್ ಅಧಿಕಾರಿ ಎಸ್. ಸಿದ್ದರಾಜು ಮೊದಲಾದವರು ಇದ್ದರು.ಜೆಎಸ್‌ಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಮೈಸೂರು ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಮತದಾನ ಸಾಕ್ಷರತಾ ಕ್ಲಬ್ ವತಿಯಿಂದ ಆಚರಿಸಲಾಯಿತು.ಸಾಕ್ಷರತಾ ಕ್ಲಬ್ ಸಂಚಾಲಕಿ ಡಾ.ಕೆ.ಸಿ.ಶ್ರುತಿ ಅವರು ಪ್ರಾಸ್ತಾವಿಕ ಭಾಷಣ ಮಾಡಿ, ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ಹಾಗೂ ಮಹತ್ವ ತಿಳಿಸಿದರು. ಕಾಲೇಜಿನ ಸಿಇಒ ಪ್ರೊ.ಬಿ.ವಿ. ಸಾಂಬಶಿವಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಜಿಲ್ಲಾ ಮತ್ತು ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುgಮಾನ ವಿತರಿಸಲಾಯಿತು.ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕಿ ಎನ್. ರತ್ನಮ್ಮ ಸ್ವಾಗತಿಸಿದರು. ಪ್ರಭಾರ ಪ್ರಾಂಶುಪಾಲೆ ಪ್ರೊ.ಟಿ.ವಿ. ಲತಾ ವಂದಿಸಿದರು. ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.