ಸಾರಾಂಶ
ಕನ್ನಡಪ್ರಭ ವಾರ್ತೆ, ತರೀಕೆರೆ
ಮಕ್ಕಳಲ್ಲಿ ರಾಷ್ಟ್ರಾಭಿಮಾನ ಮೂಡಿಸಬೇಕೆಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಲೀಲಾ ಸೋಮಶೇಖರಯ್ಯ ಹೇಳಿದರು.ಪಟ್ಟಣದ ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಪ್ರತಿಯೊಬ್ಬರಲ್ಲಿ ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನ ಮೂಡಿಸುವ ಅವಶ್ಯಕತೆ ಇದೆ, ಬೆಳೆಯುವ ಮಕ್ಕಳ ಹಾಗೂ ವಿದ್ಯಾರ್ಥಿಗಳಲ್ಲಿ ಶಿಕ್ಷಣ ಜೊತೆಗೆ ದೇಶ, ನಾಡು, ಭಾಷೆ ನನ್ನದೆಂಬ ಸ್ವಾಭಿಮಾನ ಇರಬೇಕು, ಒಳ್ಳೆಯ ಜ್ಞಾನ, ಕಲಿಕೆ, ಅರಿವು, ಸಾಧನೆ ಮತ್ತು ಗುರಿಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು. ಸಂಸ್ಥೆಯ ಆಡಳಿತಾಧಿಕಾರಿ ಅನೂಪ್ ಮಾತನಾಡಿ ಮಹಾನ್ ಸೇನಾನಿ ಹೆಮ್ಮೆಯ ಕನ್ನಡಿಗ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಭೂಮಿಕೆಯಲ್ಲಿ ತನ್ನದೇ ಆದ ಕೊಡುಗೆ ನೀಡಿದವರು, ಸಂಗೊಳ್ಳಿ ರಾಯಣ್ಣನ ಹುಟ್ಟು ಹಾಗೂ ಬಲಿದಾನ ದೇಶದ ಇತಿಹಾಸದಲ್ಲಿ ಹೆಚ್ಚು ಮಹತ್ವ ಪಡೆದಿದೆ. ರಾಯಣ್ಣರವರ ಶೂರತನ ಮತ್ತು ಪ್ರಾಮಾಣಿಕತೆಗೆ ಮೆಚ್ಚಿ ಕಿತ್ತೂರು ರಾಣಿ ಚೆನ್ನಮ್ಮ ತಮ್ಮ ಅಂಗರಕ್ಷಕರ ನಾಯಕನ್ನಾಗಿ ಮಾಡಿಕೊಂಡರು, ಸಂಗೊಳ್ಳಿ ರಾಯಣ್ಣನ ಪ್ರಾಮಾಣಿಕತೆ ಇಂದಿನ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಇವರ ಆದರ್ಶ, ತತ್ವ, ಹಾಗೂ ಧೈರ್ಯ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕೆಂದು ಹೇಳಿದರು.
ಶಾಲೆ ಮುಖ್ಯ ಶಿಕ್ಷಕಿ ವಿದ್ಯಾ ಮಾತನಾಡಿ ಭಾರತ ಸಂವಿಧಾನವನ್ನು 1949 ರ ನವೆಂಬರ್ 26 ರಂದು ಅಂಗೀಕರಿ ಜನವರಿ 26,1950ರಂದು ಜಾರಿಗೆ ಬಂದಿತು, ಜನವರಿ 26ಅನ್ನು ಭಾರತದ ಗಣರಾಜ್ಯೋತ್ಸವ ಎಂದು ಆಚರಿಸ ಲಾಗುತ್ತದೆ. ನಮ್ಮ ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರಿಗೆ ಗೌರವ ಸಮರ್ಪಣೆ ಸಲ್ಲಿಸೋಣವೆಂದು ಹೇಳಿದರು,ಕಾರ್ಯಕ್ರಮದಲ್ಲಿ ಸಂಸ್ಥೆ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯರು, ವಿದ್ಯಾರ್ಥಿಗಳು, ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, 26ಕೆಟಿಆರ್.ಕೆ.08ಃ
ತರೀಕೆರೆಯಲ್ಲಿ ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ 75ನೇ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುಣ್ಯ ಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾ ಸಂಸ್ಥೆ ಕಾರ್ಯದರ್ಶಿ ಲೀಲಾ ಸೋಮಶೇಖರಯ್ಯ, ಅಡಳಿತಾಧಿಕಾರಿ ಅನೂಪ್ ಮತ್ತಿತರರು ಇದ್ದಾರೆ.