ಮನಮೋಹನಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮನರೇಗಾ ಯೋಜನೆ ಜಾರಿಗೊಳಿಸಿ ಕೂಲಿಕಾರರು ಮತ್ತು ಬಡಜನರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಿದ್ದರು. ಈಗ ಮೋದಿ ಸರ್ಕಾರ ಈ ಯೋಜನೆಯನ್ನು ಸರ್ವನಾಶ ಮಾಡಲು ಹೊರಟಿದೆ. ಹೀಗಾಗಿ ಇದರ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಮನರೇಗಾ ಬಚಾವ್‌ ಆಂದೋಲನಕ್ಕೆ ಕರೆ ನೀಡಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಸೋಮವಾರ ಹಮ್ಮಿಕೊಂಡಿದ್ದ ನರೇಗಾ ಬಚಾವೋ ಸಂಗ್ರಾಮ್ ಆಂದೋಲನದ ಅಂಗವಾಗಿ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಮನರೇಗಾ ಯೋಜನೆಗೆ ಪ್ರತಿವರ್ಷ 36 ಸಾವಿರ ಕೋಟಿ ರು. ಹಣವನ್ನು ಖರ್ಚು ಮಾಡಲಾಗುತ್ತಿದೆ. ಇದರಲ್ಲಿ 6.5 ಸಾವಿರ ಕೋಟಿ ರಾಜ್ಯ ಭರಿಸುತ್ತಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ಕೊಡದೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಕೂಲಿಕಾರರಿಗೆ ಕೂಲಿ ಸಿಗದಂತಹ ಪರಿಸ್ಥಿತಿ ನಿರ್ಮಿಸಿ ಸಂವಿಧಾನಬದ್ಧ ಹಕ್ಕು ಕಸಿದುಕೊಳ್ಳುತ್ತಿದ್ದಾರೆ. ಇದನ್ನು ವಿರೋಧಿಸಿ ಎಐಸಿಸಿ ಮತ್ತು ಕೆಪಿಸಿಸಿ ಮನರೇಗಾ ಪುನಃ ಆರಂಭಿಸಬೇಕು, ವಿಬಿ ಗ್ರಾಮ್ ಜಿ ರದ್ದು ಪಡಿಸಬೇಕು ಆಗ್ರಹಿಸಿ ದೇಶದಾದ್ಯಂತ ನರೇಗಾ ಬಚಾವ್ ಸಂಗ್ರಾಮ್ ಆಂದೋಲನಕ್ಕೆ ಕರೆ ನೀಡಿದೆ. ಜ.15 ರಿಂದ 17 ರವರೆಗೆ ಒಂದು ದಿನ ಮಿನಿವಿಧಾನಸೌಧ ಕಚೇರಿಯ ಮುಂದೆ ಸಾಂಕೇತಿಕ ಧರಣಿ ಸತ್ಯಾಗ್ರಹ, ಜ.18 ರಿಂದ 29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಸಂಪರ್ಕ ಸಭೆ, ಜ.27 ರಿಂದ ಫೆ.2 ರವರೆಗೆ 7 ದಿನಗಳ ಕಾಲ 5 ರಿಂದ 10 ಕಿ.ಮೀ ವರೆಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಂ.ಲಿಂಗಪ್ಪ ದಢೇಸುಗೂರು, ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ ಸೇರಿ ಮುಖಂಡರು, ಕಾರ್ಯಕರ್ತರು ಇದ್ದರು.