ಸಾರಾಂಶ
ಕೊಡಗು ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ತಾಲೂಕು ಮಟ್ಟದ ಪ್ರಕೃತಿ ವಿಕೋಪ ಸಭೆ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೊಡಗು ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ತಾಲೂಕು ಮಟ್ಟದ ಪ್ರಕೃತಿ ವಿಕೋಪ ಸಭೆ ನಡೆಯಿತು.ಸಭೆಯಲ್ಲಿ ತಹಸೀಲ್ದಾರ್ ಕೃಷ್ಣಮೂರ್ತಿ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಪರಮೇಶಕುಮಾರ್ ಉಪಸ್ಥಿತರಿದ್ದರು.
ಸಭೆಯಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಮತ್ತು ವಿಎಒ ಅವರೊಂದಿಗೆ ಸಭೆ ನಡೆಸಿ ಕಾರ್ಯಸೂಚಿಯನುಸಾರ ಪ್ರಗತಿ ವರದಿ ಪರಿಶೀಲನೆ, ಪ್ರಕೃತಿ ವಿಕೋಪ ಸಮಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.