ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ಚಿಕಿತ್ಸೆ ಮಾದರಿ: ಜಗದೀಶ್ ಶೆಟ್ಟರ್

| Published : Oct 12 2023, 12:00 AM IST

ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ಚಿಕಿತ್ಸೆ ಮಾದರಿ: ಜಗದೀಶ್ ಶೆಟ್ಟರ್
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆದು ನಂತರ ಮೆಚ್ಚುಗೆ ವ್ಯಕ್ತಪಡಿಸುತ್ತ ಸಾರ್ವಜನಿಕರ ಆರೋಗ್ಯ ವೃದ್ಧಿಗೆ ಪ್ರಕೃತಿ ಚಿಕಿತ್ಸಾ ಸೌಲಭ್ಯ ಕಲ್ಪಿಸಿದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ ಧರ್ಮಸ್ಥಳದ ಶ್ರೀ ಧ .ಮಂ .ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಕಳೆದ 1೦ ದಿನ ಚಿಕಿತ್ಸೆ ಪಡೆದು ಆರೋಗ್ಯದಲ್ಲಿ ಸುಧಾರಣೆಯಾಗಿ ಸಂತೋಷವಾಗಿದೆ. 3 ನೇ ಬಾರಿ ಕುಟುಂಬ ಸಮೇತ ಚಿಕಿತ್ಸೆ ಪಡೆದಿದ್ದು, ಮಾನಸಿಕ ಹಾಗು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ಚಿಕಿತ್ಸೆ ಮಾದರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ತಿಳಿಸಿದರು. ಅವರು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆದು ನಂತರ ಮೆಚ್ಚುಗೆ ವ್ಯಕ್ತಪಡಿಸುತ್ತ ಸಾರ್ವಜನಿಕರ ಆರೋಗ್ಯ ವೃದ್ಧಿಗೆ ಪ್ರಕೃತಿ ಚಿಕಿತ್ಸಾ ಸೌಲಭ್ಯ ಕಲ್ಪಿಸಿದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಯೋಗ ಮತ್ತು ಪ್ರಕೃತಿ ಚಿಕಿತ್ಸೆಯನ್ನು ರಾಜ್ಯದ ಜನರಿಗೆ ತಲುಪಿಸುತ್ತಿರುವುದು ಹೆಮ್ಮೆಯ ವಿಚಾರ. ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ ಶೆಟ್ಟಿ, ಸ್ನಾತಕೋತ್ತರ ವೈದ್ಯ ಡಾ. ಗುರುಪ್ರವೀಣ್ ಎಸ್., ಪ್ರಬಂಧಕ ಸ್ವಸ್ತಿಕ್ ಅವರು ಅತ್ತ್ಯುತ್ತಮ ಕಾಳಜಿ ವಹಿಸಿ,ಉತ್ತಮವಾಗಿ ನೋಡಿಕೊಂಡು ಚಿಕಿತ್ಸೆ ನೀಡಿದ ಸಿಬ್ಬಂದಿಗಳಿಗೆ ತುಂಬು ಹೃದಯದ ಧನ್ಯವಾದ ಸಮರ್ಪಿಸಿದ್ದಾರೆ.