ಕತಾರ್‌ನಲ್ಲಿ ಐ.ಸಿ.ಸಿ.ಯಿಂದ ಜನಮನ ಗೆದ್ದ ನಾಟ್ಯಾಂಜಲಿ

| Published : Feb 19 2024, 01:32 AM IST

ಸಾರಾಂಶ

ಸಾಂಸ್ಕೃತಿಕ ಉತ್ಸವದಲ್ಲಿ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ 25 ಸಂಘ ಸಂಸ್ಥೆಗಳು ಪ್ರದರ್ಶನ ನೀಡಿದವು. ಭಾರತದ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ ಸಚಿನ್ ದಿನಕರ್ ಶಂಕಪಾಲ್ ಅವರು ಮುಖ್ಯ ಅತಿಥಿಯಾಗಿದ್ದರು.

ಕನ್ನಡಪ್ರಭ ವಾರ್ತೆ ಉಡುಪಿಕತಾರ್‌ನಲ್ಲಿ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಸಾಂಸ್ಕೃತಿಕ ಕೇಂದ್ರ (ಐ.ಸಿ.ಸಿ.)ದ ಸಹಯೋಗದೊಂದಿಗೆ, ಸಾಂಸ್ಕೃತಿಕ ಸಂಭ್ರಮ ‘ನಾಟ್ಯಾಂಜಲಿ: ಇಂಟರ್ ಎಒ ಡ್ಯಾನ್ಸ್ ಫೆಸ್ಟಿವಲ್’ ಅನ್ನು ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಿತ್ತು.ಈ ಸಾಂಸ್ಕೃತಿಕ ಉತ್ಸವದಲ್ಲಿ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ 25 ಸಂಘ ಸಂಸ್ಥೆಗಳು ಪ್ರದರ್ಶನ ನೀಡಿದವು. ಭಾರತದ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ ಸಚಿನ್ ದಿನಕರ್ ಶಂಕಪಾಲ್ ಅವರು ಮುಖ್ಯ ಅತಿಥಿಯಾಗಿದ್ದರು. ಅವರು ತಮ್ಮ ಭಾಷಣದಲ್ಲಿ, ಐ. ಸಿ. ಸಿ. ವ್ಯವಸ್ಥಾಪಕ ಸಮಿತಿಯು ಈ ಹಿಂದೆ ಕೈಗೊಂಡ ವಿವಿಧ ಉಪಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಭವಿಷ್ಯದಲ್ಲಿ ಈ ಪ್ರವೃತ್ತಿ ಮುಂದುವರಿಯುತ್ತದೆ ಎಂದು ಆಶಿಸಿದರು.ಐ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್, ಸಭಿಕರನ್ನು ಮತ್ತು ಗಣ್ಯರನ್ನು ಸ್ವಾಗತಿಸಿದರು. ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು, ಈ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಮುದಾಯದ ಪ್ರತಿಕ್ರಿಯೆಗಾಗಿ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಐ.ಸಿ.ಸಿ. ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳನ್ನು ವಿವರಿಸಿದರು.

ಈ ಕಾರ್ಯಕ್ರಮವು ಭಾರತದ ವಲಸಿಗರಿಂದ ಭಾರಿ ಪ್ರಶಂಸೆಯನ್ನು ಗಳಿಸಿತು. ಈ ಸಂದರ್ಭ ಐಸಿಸಿ ವ್ಯವಸ್ಥಾಪಕ ಸಮಿತಿಯ ಸದಸ್ಯರು, ಇತರ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಸಮಿತಿಯ ಸದಸ್ಯರು ಮತ್ತು ಸಮುದಾಯದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಅಬ್ರಹಾಂ ಜೋಸೆಫ್ ವಂದಿಸಿದರು. ಸಾಂಸ್ಕೃತಿಕ ಚಟುವಟಿಕೆಗಳ ಮುಖ್ಯಸ್ಥೆ ಸುಮಾ ಮಹೇಶ್ ಗೌಡ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.