ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿ 36.60 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿರುವ ಶೌಚಾಲಯ ಮತ್ತು ಬಟ್ಟೆ ಬದಲಿಸುವ ಕೊಠಡಿಯನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿ 36.60 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿರುವ ಶೌಚಾಲಯ ಮತ್ತು ಬಟ್ಟೆ ಬದಲಿಸುವ ಕೊಠಡಿಯನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.ದೇವಾಲಯದ ಭಾಗದಲ್ಲಿ ಹಲವಾರು ವರ್ಷಗಳಿಂದ ಶೌಚಾಲಯ ಹಾಗೂ ಪಾರ್ಕಿಂಗ್ ವ್ಯವಸ್ಥೆ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ 36.60 ಲಕ್ಷ ರು. ವೆಚ್ಚದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ಹಾಗೂ ಬಟ್ಟೆ ಬದಲಿಸುವ ಕೊಠಡಿ ನಿರ್ಮಿಸಲಾಗಿದೆ ಎಂದು ಹೇಳಿದರು. ದೇವಾಲಯಕ್ಕೆ ಹಲವಾರು ಭಕ್ತಾದಿಗಳು ಭೇಟಿ ನೀಡುತ್ತಿದ್ದು, ಶೌಚಾಲಯದ ಕೊರತೆ ಇತ್ತು. ಆದ್ದರಿಂದ ದೇವಾಲಯ ಸಮಿತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಕಾರದಲ್ಲಿ ಜಾಗ ನೀಡಿದ್ದು, ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿಗೆ ಅನುದಾನ ಒದಗಿಸಲಾಗುವುದು ಎಂದು ಶಾಸಕರು ತಿಳಿಸಿದರು. ದೇವಾಲಯ ಸಮಿತಿಯಿಂದ ಶಾಸಕರನ್ನು ಗೌರವಿಸಲಾಯಿತು. ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಶ್ರೀ ಓಂಕಾರೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಸದಸ್ಯರಾದ ಜಿ. ರಾಜೇಂದ್ರ, ಅಂಬೆಕಲ್ ಕುಶಾಲಪ್ಪ, ಪ್ರಕಾಶ್ ಆಚಾರ್ಯ, ಸಂತೋಷ್ ಭಟ್, ವೀಣಾಕ್ಷಿ, ಕಾರ್ಯನಿರ್ವಹಕ ಅಧಿಕಾರಿ ದೇವರಾಜು, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಎಚ್. ಶಶಿಧರ್, ಸಮಾಲೋಚಕರಾದ ಜತಿನ್ ಬೋಪಣ್ಣ, ಸಹಾಯಕ ಎಂಜಿನಿಯರ್ ಎಸ್. ಮದನ್ ಪ್ರಮುಖರಾದ ಕೆ.ಜಿ. ಪೀಟರ್, ತೆನ್ನಿರಾ ಮೈನಾ, ದಿನೇಶ್, ಮಿನಾಜ್ ಪ್ರವೀಣ್, ಪ್ರೇಮ, ಕವನ್ ಇತರರು ಇದ್ದರು.