ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ: ನಗರ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಸಮುದಾಯ ಭವನ ವಾಸ್ತು ಶಾಂತಿ ಕಾರ್ಯಕ್ರಮ ಸಂಸ್ಥೆ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಭಾನುವಾರ ನಡೆಯಿತು.

ಹಿಂದೂಗಳ ಹೊಸ ವರ್ಷ ಯುಗಾದಿ ಪಾಡ್ಯ ಅಂಗವಾಗಿ ಬಸನಗೌಡ ಪಾಟೀಲ ಯತ್ನಾಳರು ಮತ್ತು ಪತ್ನಿ ಶೈಲಜಾ ಪಾಟೀಲ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗೋ ಪೂಜೆ ಸಲ್ಲಿಸಿ, ಸಿಹಿ ತಿನಿಸಿ ಶಿವಾನುಭವ ಸಮುದಾಯ ಭವನ ಪ್ರವೇಶಿಸಿದರು. ವಾಸ್ತು ಶಾಂತಿ ಅಂಗವಾಗಿ ಹೋಮ ಹವನ, ನವಗ್ರಹ ಪೂಜೆ, ಅಷ್ಟ ದಿಕ್ಪಾಲಕ, ಮಹಾಲಕ್ಷ್ಮೀ ಪೂಜೆ ನೆರವೇರಿಸಲಾಯಿತು. ಇದೇ ವೇಳೆ 500ಕ್ಕೂ ಹೆಚ್ಚು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು. ಮಾಜಿ ಸಚಿವ ದಿ.ಬಿ.ಎಂ.ಪಾಟೀಲ ಹೆಸರಿನ ಪ್ರಸಾದ ನಿಲಯ, ಮಾಜಿ ಶಾಸಕ ದಿ.ಆರ್.ಆರ್.ಕಲ್ಲೂರ ಹೆಸರಿನ ಅಕ್ಷತಾ ಮಂಟಪದಲ್ಲಿಯೂ ಪೂಜೆ ನಡೆಸಲಾಯಿತು.ಸಂಸ್ಥೆಯ ಚೇರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ನಿರ್ದೇಶಕರಾದ ಸದಾನಂದ ದೇಸಾಯಿ, ಬಸವರಾಜ ಸುಗೂರ, ಮಲ್ಲಿಕಾರ್ಜುನ ಸಜ್ಜನ, ಶಿವಾನಂದ ನೀಲಾ, ನಿಂಗೊಂಡಪ್ಪ ಗೋಲಾಯಿ, ಮಡಿವಾಳಪ್ಪ ಕರಡಿ, ವಿಜಯಕುಮಾರ ಡೋಣಿ, ಬಸವರಾಜ ಗಣಿ, ಸಂಗನಗೌಡ ನಾಡಗೌಡ, ಸುಧೀರ ಚಿಂಚಲಿ, ಸದಾಶಿವ ಗುಡ್ಡೋಡಗಿ, ನಾಗಪ್ಪ ಗುಗ್ಗರಿ, ಸಾಯಿಬಣ್ಣ ಭೋವಿ, ಮಲಕಪ್ಪ ಗಾಣಿಗೇರ, ರಮೇಶ ಹಳ್ಳದ, ಮಲ್ಲಿಕಾರ್ಜುನ ಹಕ್ಕಾಪಕ್ಕಿ, ಎಸ್.ಸಿ.ಉಪ್ಪಿನ ಸೇರಿದಂತೆ ಗಣ್ಯರು, ಮಹಿಳೆಯರು ಭಾಗವಹಿಸಿದ್ದರು.