ನೌಕಾಪಡೆ ಮಾಹಿತಿ ಸೋರಿಕೆ: ಉನ್ನತ ತನಿಖೆಗೆ ಯಶ್ಪಾಲ್ ಆಗ್ರಹ

| Published : Nov 23 2025, 03:15 AM IST

ನೌಕಾಪಡೆ ಮಾಹಿತಿ ಸೋರಿಕೆ: ಉನ್ನತ ತನಿಖೆಗೆ ಯಶ್ಪಾಲ್ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸಕಾಲಿಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು ಅಭಿನಂದನೀಯ. ಕರಾವಳಿ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ದೇಶದ ಅತೀದೊಡ್ಡ ಸರ್ವಕಾಲಿಕ ಮಲ್ಪೆ ಬಂದರಿನಲ್ಲಿ ಕಾರ್ಯಾಚರಿಸುತ್ತಿರುವ ಈ ಶಿಪ್‌ಯಾರ್ಡ್‌ನಲ್ಲಿ ದೇಶದ ಭದ್ರತೆಗೆ ಧಕ್ಕೆ ತರುವ ಈ ಘಟನೆ ಅತ್ಯಂತ ಆಘಾತಕಾರಿಯಾಗಿದೆ ಎಂದು ಯಶ್ಪಾಲ್‌ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್‌ನಿಂದ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಘಟನೆ ಅತ್ಯಂತ ಆತಂಕಕಾರಿಯಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗೃಹಇಲಾಖೆಗೆ ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸಕಾಲಿಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು ಅಭಿನಂದನೀಯ. ಕರಾವಳಿ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ದೇಶದ ಅತೀದೊಡ್ಡ ಸರ್ವಕಾಲಿಕ ಮಲ್ಪೆ ಬಂದರಿನಲ್ಲಿ ಕಾರ್ಯಾಚರಿಸುತ್ತಿರುವ ಈ ಶಿಪ್‌ಯಾರ್ಡ್‌ನಲ್ಲಿ ದೇಶದ ಭದ್ರತೆಗೆ ಧಕ್ಕೆ ತರುವ ಈ ಘಟನೆ ಅತ್ಯಂತ ಆಘಾತಕಾರಿಯಾಗಿದೆ ಎಂದವರು ಹೇಳಿದ್ದಾರೆ.

ಕಳೆದ ವರ್ಷ ಮಲ್ಪೆ ಭಾಗದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಕೂಡ ಪೊಲೀಸರು ಬಂಧಿಸಿದ್ದರು. ಇಂತಹ ಘಟನೆಗಳು ಮಲ್ಪೆ ಪರಿಸರದಲ್ಲಿ ನಿರಂತರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಸಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಿ, ಅಕ್ರಮ ವಲಸಿಗರು ಹಾಗೂ ಬಂಧಿತ ಆರೋಪಿಗಳ ಜಾಲದ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನೂ ನಡೆಸಿ ದೇಶದ ಭದ್ರತೆಗೆ ಸವಾಲಾಗಿರುವ ದೇಶ ವಿರೋಧಿ ಶಕ್ತಿಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಉನ್ನತ ಮಟ್ಟದ ತನಿಖೆಯನ್ನೂ ನಡೆಸುವಂತೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.