ಕೇರಳ ಗಡಿಯಲ್ಲಿ ನಕ್ಸಲ್‌-ಪೊಲೀಸ್‌ ಗುಂಡಿನ ಚಕಮಕಿ: ಕೊಡಗು ಜಿಲ್ಲೆ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ

| Published : Nov 16 2023, 01:17 AM IST

ಕೇರಳ ಗಡಿಯಲ್ಲಿ ನಕ್ಸಲ್‌-ಪೊಲೀಸ್‌ ಗುಂಡಿನ ಚಕಮಕಿ: ಕೊಡಗು ಜಿಲ್ಲೆ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕೇರಳದ ಗಡಿಯಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿಯಿಂದ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಇದರಿಂದ ಕರ್ನಾಟಕ ಗಡಿಯತ್ತ ನುಸುಳುವ ಶಂಕೆ ಇದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಗಡಿಭಾಗದಲ್ಲಿ ನಿಯೋಜನೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೇರಳದ ಗಡಿ ಜಿಲ್ಲೆ ವಯನಾಡಿನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕರ್ನಾಟಕ ಗಡಿ ನುಸುಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳದ ಗಡಿಯಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿಯಿಂದ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಇದರಿಂದ ಕರ್ನಾಟಕ ಗಡಿಯತ್ತ ನುಸುಳುವ ಶಂಕೆ ಇದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಗಡಿಭಾಗದಲ್ಲಿ ನಿಯೋಜನೆ ಮಾಡಲಾಗಿದೆ. ಕೊಡಗಿನ ಕುಟ್ಟ, ಬಿರುನಾಣಿ, ಪರಕಟಗೇರಿ ಹಾಗೂ ತೆರಾಲು ಭಾಗಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ.ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡು ಬಂದರೆ ಕೂಡಲೇ ವಿಚಾರಣೆಗೆ ಒಳಪಡಿಸುವಂತೆ ಎಸ್‍ಪಿ ರಾಮರಾಜನ್ ಆದೇಶ ನೀಡಿದ್ದಾರೆ.

ಗಡಿ ಭಾಗದಲ್ಲಿ ಸಂಚರಿಸುವ ವಾಹನಗಳ ಮೇಲೂ ಕಣ್ಣಿರಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ತೆರಾಲು ಸೇರಿದಂತೆ ಕೆಲವೆಡೆ ನಾಕಾಬಂದಿ ಹಾಕಲಾಗಿದೆ. ಈಗಾಗಲೇ ಕುಟ್ಟ ಭಾಗದಲ್ಲಿ ಎ.ಎನ್.ಎಫ್. ತಂಡ ಕೆಲಸ ನಿರ್ವಹಿಸುತ್ತಿದೆ. ಇದರೊಂದಿಗೆ ಪೊಲೀಸರು ಈಗ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಗಡಿಭಾಗಕ್ಕೆ ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ವೀರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.