ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಎನ್.ಬಿ.ಮೋಹನ್ ಕುಮಾರಿ ಸೋಮವಾರ ಅಧಿಕಾರ ಸ್ವೀಕರಿಸಿದರು.ನ್ಯಾಯಾಲಯದ ಸಂಕೀರ್ಣದಲ್ಲಿರುವ ವಕೀಲರ ಸಂಘದ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ ಮೋಹನ್ ಕುಮಾರಿ ಅವರನ್ನು ವಕೀಲರ ಸಂಘದ ವತಿಯಿಂದ ಸ್ವಾಗತಿಸಿ ಅಭಿನಂದಿಸಲಾಯಿತು.
ಮದ್ದೂರು ನ್ಯಾಯಾಲಯದಲ್ಲಿ ಹಾಲಿ ಅಪರ ಸಿವಿಲ್ ನ್ಯಾಯಾಧೀಶರಾಗಿದ್ದ ಅಜಿತ್ ದೇವರಮನಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಬೆಂಗಳೂರಿನ ವಿಧಾನಸೌಧದಲ್ಲಿ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಸಹಾಯಕ ಸಾಲೀಸಿಡರ್ ಮತ್ತು ಸರ್ಕಾರದ ಪದ ನಿಮಿತ್ತ ಅಧಿಕ ಕಾರ್ಯದರ್ಶಿಯಾಗಿದ್ದ ಎನ್.ಬಿ. ಮೋಹನ್ ಕುಮಾರಿಯವರನ್ನು ಮದ್ದೂರು ನ್ಯಾಯಾಲಯದ ಅಪರ ಸಿವಿಲ್ ನ್ಯಾಯಾಧೀಶರಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.ಅಭಿನಂದನೆ ಸ್ವೀಕರಿಸ ಬಳಿಕ ಮಾತನಾಡಿದ ನ್ಯಾಯಾಧೀಶರು, ವಕೀಲರು ನ್ಯಾಯಾಲಯದಲ್ಲಿ ಬದ್ಧತೆಯಿಂದ ವಾದ ಮಂಡಿಸಬೇಕು. ನ್ಯಾಯಬೇಡಿ ಬರುವ ಬಡ ಕಕ್ಷಿದಾರರಿಗೆ ಶೀಘ್ರವಾಗಿ ನ್ಯಾಯದಾನಕ್ಕೆ ಸಹಕಾರ ನೀಡಬೇಕು ಇದರಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಎಂ.ಎಸ್.ಹರಿಣಿ, ಎಸ್.ಸಿ.ನಳೀನ, ಎನ್.ವಿ.ಕೋನಪ್ಪ, ಎಸ್.ಪಿ.ಕಿರಣ್, ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೀತಮ್ ದೇವಿಡ್, ಸುರೇಶ್, ಕಪನಿ ನಂಜೇಶ್ವರ, ಎಂ.ಪುಷ್ಪಲತಾ, ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ, ಉಪಾಧ್ಯಕ್ಷ ಪುಟ್ಟರಾಜು, ಪ್ರಧಾನ ಕಾರ್ಯದರ್ಶಿ ಸುಮಂತ್, ಖಜಾಂಚಿ ಪ್ರಸನ್ನ, ಹಿರಿಯ ವಕೀಲರಾದ ಎಚ್.ವಿ.ಬಾಲರಾಜು, ಎಚ್.ಮಾದೇಗೌಡ, ರಾಮಕೃಷ್ಣೇಗೌಡ ಸೇರಿದಂತೆ ವಕೀಲ ಸಂಘದ ಪದಾಧಿಕಾರಿಗಳು ಮತ್ತು ವಕೀಲರಗಳು ಪಾಲ್ಗೊಂಡಿದ್ದರು.