ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಗೆಲವು ಖಚಿತ: ಡಾ.ಇಂದ್ರೇಶ್

| Published : Apr 16 2024, 01:00 AM IST

ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಗೆಲವು ಖಚಿತ: ಡಾ.ಇಂದ್ರೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮೂರನೇ ಬಾರಿಗೆ ಮೋದಿ ಪ್ರಧಾನಮಂತ್ರಿ ಮಾಡಬೇಕು ಜನತೆ ತೀರ್ಮಾನಿಸಿದ್ದಾರೆ. ವಿಪರ್ಯಾಸವೆಂದರೆ ಎನ್‌ಡಿಎ ಮೈತ್ರಿಕೂಟ 400 ಸೀಟು ಗೆಲ್ಲಲು ಹೋರಾಟ ನಡೆಸುತ್ತಿದ್ದರೆ, ಕಾಂಗ್ರೆಸ್ ಪಕ್ಷ ಕೇವಲ 40 ಸೀಟು ಪಡೆಯಲು ಎಣಗಾಡುವ ಸ್ಥಿತಿ ನಿರ್ಮಾಣವಾಗಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ 40 ಸೀಟು ಗೆಲ್ಲುವುದಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಲೇವಡಿ ಮಾಡಿದರು.

ಪಟ್ಟಣದಲ್ಲಿ ಸೋಮವಾರ ಎನ್‌ಡಿಎ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರ ಪಟ್ಟಣದಲ್ಲಿ ಪ್ರಚಾರ ನಡೆಸಿ ಮಾತನಾಡಿ, ದೇಶದಲ್ಲೆಡೆ ಪ್ರಧಾನಿ ಮೋದಿ ಅವರ ಪರ ಅಲೆಸೃಷ್ಟಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮೂರನೇ ಬಾರಿಗೆ ಮೋದಿ ಪ್ರಧಾನಮಂತ್ರಿ ಮಾಡಬೇಕು ಜನತೆ ತೀರ್ಮಾನಿಸಿದ್ದಾರೆ ಎಂದರು.

ವಿಪರ್ಯಾಸವೆಂದರೆ ಎನ್‌ಡಿಎ ಮೈತ್ರಿಕೂಟ 400 ಸೀಟು ಗೆಲ್ಲಲು ಹೋರಾಟ ನಡೆಸುತ್ತಿದ್ದರೆ, ಕಾಂಗ್ರೆಸ್ ಪಕ್ಷ ಕೇವಲ 40 ಸೀಟು ಪಡೆಯಲು ಎಣಗಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವು ಖಚಿತ. ಅತ್ಯಂತ ಅಧಿಕ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಬಿಜೆಪಿ-ಜೆಡಿಎಸ್ ಎರಡು ಪಕ್ಷದ ಕಾರ್ಯಕರ್ತರು, ಮುಖಂಡರು ಎಚ್.ಡಿ.ಕುಮಾರಸ್ವಾಮಿ ಅವರ ಗೆಲುವಿಗೆ ಒಟ್ಟಾಗಿ ಶ್ರಮಿಸಬೇಕು ಎಂದರು.

ಪ್ರಧಾನಿ ಮೋದಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಜನರ ಕೈಗೆ ತಲುಪಿಸುವ ಸಲುವಾಗಿ ದೇಶಾದ್ಯಂತ ಮಹಾಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಪಟ್ಟಣದ ಪುರಸಭೆ ಆವರಣದಿಂದ ಪ್ರಚಾರ ಆರಂಭಿಸಿ ಡಾ.ಎನ್.ಎಸ್.ಇಂದ್ರೇಶ್ ಕಾರ್ಯಕರ್ತರೊಂದಿಗೆ ಸಂತೆ ಮೈದಾನ, ಹಳೇ ಬಸ್ ನಿಲ್ದಾಣ, ಹೂವಿನ ಮಾರುಕಟ್ಟೆ ಸೇರಿದಂತೆ ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ಪ್ರಚಾರ ನಡೆಸಿದರು. ಇದೇ ವೇಳೆ ರೈತ ಸಂಘದ ಯುವ ಮುಂಖಡ ಹರ್ಷ ಅವರು ರೈತಸಂಘ ತೊರೆದು ಬಿಜೆಪಿ ಸೇರ್ಪಡೆಗೊಂಡರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚ್ ಅಧ್ಯಕ್ಷೆ ಮಂಗಳ ನವೀನ್ ಕುಮಾರ್, ಬಿಜೆಪಿ ಅಧ್ಯಕ್ಷ, ಧನಂಜಯ್, ಕೆ.ಎಲ್.ಆನಂದ್, ಎಸ್.ಎನ್.ಟಿ.ಸೋಮಶೇಖರ್, ಬಸವರಾಜು, ವೀರಭದ್ರಸ್ವಾಮಿ, ಈರೇಗೌಡ, ಅಶೋಕ್, ಸಂಜೀವ್, ಸೋಮಶೇಖರ್, ಶ್ರೀನಿವಾಸ್ ನಾಯಕ್, ಶಂಭೂವಿನಹಳ್ಳಿ ಮಂಜುನಾಥ್, ಮಹಿಳಾ ಘಟಕ ತಾಲೂಕು ಅಧ್ಯಕ್ಷೆ ಮಂಜುಳಶಂಕರ್, ಸವಿತ ಸೇರಿದಂತೆ ಹಲವರು ಭಾಗವಹಿಸಿದ್ದರು.