ಸಾರಾಂಶ
ತುಮಕೂರು ಲೋಕಸಭಾ ಕ್ಷೇತ್ರದ ಎನ್.ಡಿ.ಎ.ಅಭ್ಯರ್ಥಿ ವಿ.ಸೋಮಣ್ಣ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಬಿಜೆಪಿ ತಾಲೂಕು ಉಪಾಧ್ಯಕ್ಷ ಎ.ಪಿ .ರಾಜಶೇಖರಯ್ಯ ಹೇಳಿದರು.
ಕನ್ನಡ ಪ್ರಭ ವಾರ್ತೆ ಗುಬ್ಬಿ
ತುಮಕೂರು ಲೋಕಸಭಾ ಕ್ಷೇತ್ರದ ಎನ್.ಡಿ.ಎ.ಅಭ್ಯರ್ಥಿ ವಿ.ಸೋಮಣ್ಣ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಬಿಜೆಪಿ ತಾಲೂಕು ಉಪಾಧ್ಯಕ್ಷ ಎ.ಪಿ .ರಾಜಶೇಖರಯ್ಯ ಹೇಳಿದರು.ತಾಲೂಕಿನ ಹಾಗಲವಾಡಿ ಹೋಬಳಿಯ ಅರೇಹಳ್ಳಿ ,ಶಿವನೇಹಳ್ಳಿ ಭಾಗದಲ್ಲಿ ಎನ್ ಡಿ ಎ ಅಭ್ಯರ್ಥಿ ವಿ. ಸೋಮಣ್ಣ ಪರವಾಗಿ ಭಾನುವಾರ ಮತಯಾಚಿಸಿ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಉತ್ತಮ ವಾತವಾಣವಿದೆ. 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಕಾಂಗ್ರೇಸ್ ಪಕ್ಷದ ಯಾವುದೇ ಗ್ಯಾರಂಟಿಗಳು ಈ ಬಾರಿ ನಡೆಯುವುದಿಲ್ಲ. ಸಿದ್ದರಾಮಯ್ಯ ಸರ್ಕಾರ ಬಿಟ್ಟಿ ಭಾಗ್ಯಗಳನ್ನು ಕೊಟ್ಟು ಆಮೀಷ್ ಹೊಡ್ಡಿದ್ದಾರೆ. ಈ ಚುನಾವಣೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿದ್ದಾರೆ. ತುಮಕೂರಿನಲ್ಲಿ ವಿ.ಸೋಮಣ್ಣ ಗೆಲುವುಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ್ರು ಟೊಂಕ ಕಟ್ಟಿ ನಿಂತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ವಿಜೇಯಂದ್ರ ಆರ್ಶಿವಾದ ಸೋಮಣ್ಣ ಮೇಲೆ ಇದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಅಜಯ್ ಕುಮಾರ್ , ಮುಖಂಡರಾದ ಶಿವನೇಹಳ್ಳಿ ಮಲ್ಲೇಶ್ , ಜಯಣ್ಣ, ಪ್ರಭಾಣ್ಣ, ಶಾಂತರಾಜು , ಸೇರಿದಂತೆ ಬಿಜೆಪಿ ,ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.