ಸಾರಾಂಶ
ಚನ್ನಪಟ್ಟಣ: ಮುಂದಿನ ಬಮೂಲ್ ಹಾಗೂ ಜಿಪಂ, ತಾಪಂ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಂದು ತಿಂಗಳ ಒಳಗೆ ತಾಲೂಕಿನಲ್ಲಿ ಪಕ್ಷದ ಕಚೇರಿಯನ್ನು ತೆರೆಯಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ವಿವಿಧ ಕಾರ್ಯಕ್ರಮಗಳ ನಿಮತ್ತ ತಾಲೂಕಿಗೆ ಆಗಮಿಸಿದ್ದ ನಿಖಿಲ್ ಸುದ್ದಿಗಾರರೊಂದಿಗೆ ಮಾತನಾಡಿ, ಬಮೂಲ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಡದಿಯ ಹಲವಾರು ಡೇರಿ ಮುಖಂಡರ ಜತೆ ಸಭೆ ನಡೆಸಲಾಗಿದೆ. ಚನ್ನಪಟ್ಟಣದಲ್ಲಿ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.ಹಿಂದೆ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ವೇಳೆ ತೆರೆದಿದ್ದ ಎನ್‌ಡಿಎ ಕಚೇರಿ ಕಟ್ಟಡಲ್ಲೇ ನೂತನ ಎನ್‌ಡಿಎ ಕಚೇರಿ ತೆರೆಯಲಾಗುವುದು. ಸರ್ಕಾರದ ಮಟ್ಟದಲ್ಲಿನ ಕೆಲಸಕಾರ್ಯಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಜನರಿಗೆ ಅನುಕೂಲ ಕಲ್ಪಿಸಲು ಪಕ್ಷದಿಂದ ನಿವೃತ್ತ ಕೆಎಎಸ್ ಅಧಿಕಾರಿ ಎಂ.ಎಲ್. ರಮೇಶ್ ಅವರನ್ನು ತಾಲೂಕಿನಲ್ಲಿ ನಿಯೋಜಿಸಲಾಗಿದೆ. ಅವರು ಕಾರ್ಯಕರ್ತರ ಸಮಸ್ಯೆ ಆಲಿಸಲಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಅವರು ಇತ್ತೀಚಿಗೆ ತಾಲೂಕಿನ ಶಿರಗುಡ್ಡೆ ಗ್ರಾಮದಲ್ಲಿ ಅನಿಲ ಸೋರಿಕೆಯಿಂದಾಗಿ ಮನೆ ಸುಟ್ಟು ನಿರಾಶ್ರಿತರಾಗಿದ್ದ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ತಾಲೂಕಿನ ಮಾದಾಪುರ ಗ್ರಾಮದಲ್ಲಿ ಗುರುಮೂರ್ತೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಬಮೂಲ್ ನಿರ್ದೇಶಕ ಎಚ್.ಸಿ.ಜಯಮುತ್ತು, ಒಕ್ಕಲಿಗರ ಸಂಘದ ನಿರ್ದೇಶಕ ಹಾಪ್ ಕಾಮ್ಸ್ ದೇವರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರು ದೊಡ್ಡಿ ಜಯರಾಮು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಪೊಟೋ೯ಸಿಪಿಟಿ೨: ಚನ್ನಪಟ್ಟಣ ತಾಲೂಕಿನ ಶಿರಗುಡ್ಡೆ ಗ್ರಾಮದಲ್ಲಿ ಅನಿಲ ಸೋರಿಕೆಯಿಂದ ಮನೆ ಸುಟ್ಟ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ನಿಖಿಲ್ ಕುಮಾರಸ್ವಾಮಿ ಸಾಂತ್ವನ ಹೇಳಿದರು.