ಸಾರಾಂಶ
ಕನ್ನಡಪ್ರಭ ವಾರ್ತೆ ಕುಣಿಗಲ್ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ತಾಲೂಕಿನ 36 ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣ 36 ಗ್ರಾಪಂಗಳು ಎನ್ ಡಿಎ ವಶವಾಗಲಿವೆ ಎಂದು ಬಿಜೆಪಿ ಮುಖಂಡ ಡಿ ಕೃಷ್ಣಕುಮಾರ್ ತಿಳಿಸಿದ್ದಾರೆ. ತಾಲೂಕಿನ ಅಮೃತೂರು ಹೋಬಳಿಯ ಕೆ ಹೊನ್ನಮಾಚನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಎನ್ ಡಿಎ ಅಭ್ಯರ್ಥಿ ಗೌರಮ್ಮ ಗಂಗಾಧರಯ್ಯ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿ ಮಾತನಾಡಿದರು. ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿದ್ದಾರೆ. ಇದರ ಫಲವಾಗಿ ಮುಂದಿನ ದಿನಗಳಲ್ಲಿ ಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕುಣಿಗಲ್ ತಾಲೂಕಿನ ಬಹುತೇಕ ಎಲ್ಲಾ ಗ್ರಾಮ ಪಂಚಾಯಿತಿಯಲ್ಲೂ ಕೂಡ ಎನ್ ಡಿಎ ಅಧಿಕಾರವನ್ನು ಹಿಡಿಯಲಿದೆ ಎಂದರು. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ನಮ್ಮ ಜೊತೆ ಹಲವಾರು ಅಧಿಕಾರ ಸ್ವೀಕಾರ ಮಾಡಿದ ಕೆಲವರು ಹೆಚ್ಚು ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಹೋಗಿ ನಮ್ಮ ಅಭ್ಯರ್ಥಿಯನ್ನು ಅಪಹರಣ ಮಾಡುವ ಕೆಲಸ ಮಾಡಿದ್ದರು. ಆದರೆ ಅದಕ್ಕೆ ಅವರಿಗೆ ಸಹಕಾರ ಸಿಗದ ಕಾರಣ ನಮಗೆ ಗೆಲುವಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಚನ್ನಬೈರೇಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ್ ಚಿಕ್ಕ ಬೈರೇಗೌಡ ಕರೀಗೌಡ ಹೊನ್ನೇಗೌಡ ಪುಟ್ಟಸ್ವಾಮಿ ಜಗದೀಶ್ ಹೇಮಂತ್ ಇದ್ದರು.