ಸಾರಾಂಶ
ದೇಶದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಎಲ್ಲಾ ಖಾಸಗಿ ಸಂಸ್ಥೆಗಳು ನಡೆಸಿರುವ ಸಮೀಕ್ಷೆಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಚುನಾವಣಾ ಸಮೀಕ್ಷೆಯಲ್ಲಿ ವರದಿ ಬಂದಿರುವುದು ಸಂತಸ ತಂದಿದೆ ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಹನೂರು
ದೇಶದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಎಲ್ಲಾ ಖಾಸಗಿ ಸಂಸ್ಥೆಗಳು ನಡೆಸಿರುವ ಸಮೀಕ್ಷೆಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಚುನಾವಣಾ ಸಮೀಕ್ಷೆಯಲ್ಲಿ ವರದಿ ಬಂದಿರುವುದು ಸಂತಸ ತಂದಿದೆ ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು.ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಹನೂರಿನಲ್ಲಿ ಕಾರ್ಯಕರ್ತರ ಜೊತೆ ಚರ್ಚೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ರಹಿತ ಆಡಳಿತ ಮತ್ತು ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ದೇಶದ ಜನ ಮತ್ತೊಮ್ಮೆ ಬಿಜೆಪಿ ಬೆಂಬಲಿಸಿದ್ದಾರೆ ಎಂಬುದು ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದರು. ಎಲ್ಲಾ ಸಮೀಕ್ಷೆಗಳಲ್ಲಿಯೂ 370 ಕ್ಕೂ ಅಧಿಕ ಸ್ಥಾನ ಎನ್‌ಡಿಎ ಮೈತ್ರಿಕೂಟ ಪಡೆಯಲಿದೆ ಎಂದು ಸಮೀಕ್ಷೆಯಲ್ಲಿ ವರದಿ ಬಂದಿದೆ. ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯವೋ ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗುತ್ತಾರೆ ಎಂದು ತಿಳಿಸಿದ್ದೆವು ಅದು ಇಂದು ನಿಜವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.ಇನ್ನು ದೇಶದಲ್ಲಿ ಪ್ರಧಾನಿ ಮೋದಿ ಅವರ ಅಲೆ ಇರುವುದರಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ವಿವೇಕಾನಂದರವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಅವರನ್ನು ಜಯಶೀಲರನ್ನಾಗಿ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಚಂಗವಾಡಿ ರಾಜು, ಮುಖಂಡರಾದ ರಾಜುಗೌಡ, ರಮೇಶ್ ನಾಯ್ಡು, ಆನಂತಗುಪ್ತ, ಬೂದಬಾಳು ವೆಂಕಟಸ್ವಾಮಿ, ಬಸವರಾಜು, ಮಾದಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.