ಸಾರಾಂಶ
ಕೇಂದ್ರ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವೋಟು ಚೋರಿ ಆರೋಪ ಠುಸ್ ಪಟಾಕಿಯಾಗಿದೆ. ಬಿಹಾರದಲ್ಲಿ ಬಿಜೆಪಿ ಮೈತ್ರಿಕೂಟ 202 ಕ್ಷೇತ್ರಗಳಲ್ಲಿ ಬಹುಮತ ಗಳಿಸಿ ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕನಸು ನನಸಾಗಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಶುಕ್ರವಾರ ವಿಜಯೋತ್ಸವ ಆಚರಿಸಿದರು.ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಬಿಜೆಪಿ ಮುಖಂಡ, ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ನೇತೃತ್ವದಲ್ಲಿ ಪಕ್ಷದ ಭಾವುಟಗಳನ್ನು ಹಿಡಿದು ಮೆರವಣಿಗೆ ನಡೆಸಿದ ಕಾರ್ಯಕರ್ತರು, ನಂತರ ಸಂಜಯ ಚಿತ್ರಮಂದಿರದ ಬಳಿ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಷಾ ಪರ ಘೋಷಣೆ ಕೂಗಿದರು. ಬಿಹಾರ ವಿಧಾನಸಭಾ ಚುನಾವಣೆ ಎನ್ ಡಿ ಎ ಮೈತ್ರಿಕೂಟದ ಗೆಲುವು ಚಾರಿತ್ರಿಕ ವಿಜಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಈ ವೇಳೆ ಎಸ್. ಪಿ.ಸ್ವಾಮಿ ಮಾತನಾಡಿ, ಕೇಂದ್ರ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವೋಟು ಚೋರಿ ಆರೋಪ ಠುಸ್ ಪಟಾಕಿಯಾಗಿದೆ. ಬಿಹಾರದಲ್ಲಿ ಬಿಜೆಪಿ ಮೈತ್ರಿಕೂಟ 202 ಕ್ಷೇತ್ರಗಳಲ್ಲಿ ಬಹುಮತ ಗಳಿಸಿ ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕನಸು ನನಸಾಗಿದೆ ಎಂದರು.
ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಸಿ.ಕೆ.ಸತೀಶ್ ಮಾತನಾಡಿದರು. ಮನ್ಮುಲ್ ಮಾಜಿ ನಿರ್ದೇಶಕಿ ರೂಪ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ. ಮಮತಾ ರಾಂಕ, ತ್ರಿವೇಣಿ, ಕೋಮಲ, ನಗರ ಘಟಕದ ಅಧ್ಯಕ್ಷ ಮಧುಕುಮಾರ್, ರೈತ ಮೋರ್ಚಾ ಅಧ್ಯಕ್ಷ ರವಿ, ಮಹೇಶ್, ಮಧು, ಮಾ.ನ. ಪ್ರಸನ್ನ ಕುಮಾರ, ಕೆ. ಕೃಷ್ಣ, ಬೂದುಗುಪ್ಪೆ ಶಿವ ಮಲ್ಲಪ್ಪ, ಬ್ಯಾಡರಹಳ್ಳಿ ಶಿವಕುಮಾರ್, ರಾಮು, ವೀರಭದ್ರ ಸ್ವಾಮಿ ಮತ್ತಿತರರು ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))