ಎನ್‌ಡಿಆರ್‌ಎಫ್‌ ತಂಡ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರನ್ನು ಭೇಟಿ ಮಾಡಿ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿತು. ತಂಡವು ಬೆಂಗಳೂರಿನ ಆರ್‌ಆರ್‌ಸಿ ವಿಭಾಗದಿಂದ ಆಗಮಿಸಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಈಗಾಗಲೇ ಆಗಮಿಸಿರುವ ಎನ್‌ಡಿಆರ್‌ಎಫ್ ತಂಡವು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಸೋಮವಾರ ಭೇಟಿ ಮಾಡಿ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿದರು.

ಎನ್‌ಡಿಆರ್‌ಎಫ್‌ನ ಅಜಯ್ ಕುಮಾರ್ ನೇತೃತ್ವದ ತಂಡವು ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆ ಆಗುವ ಮಾಹಿತಿಯನ್ನು ಅಪ್‌ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ, ಎನ್‌ಡಿಆರ್‌ಎಫ್ ತಂಡ ಪ್ರಮುಖರು ಇದ್ದರು. ಎನ್‌ಡಿಆರ್‌ಎಫ್ ತಂಡವು ಬೆಂಗಳೂರಿನ ಆರ್‌ಆರ್‌ಸಿ ವಿಭಾಗದಿಂದ ಆಗಮಿಸಿದೆ.