ಪುನೀತ್ ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ: ಎಂ. ರಾಮೇಗೌಡ

| Published : Mar 18 2024, 01:48 AM IST

ಪುನೀತ್ ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ: ಎಂ. ರಾಮೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಅವರ ಬದುಕಿನ ದಿನಗಳಲ್ಲಿ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ಇಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ

ಕನ್ನಡಪ್ರಭ ವಾರ್ತೆ ಮೈಸೂರು

ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್‌ ರಾಜ್‌ ಕುಮಾರ್‌ ಅವರದ್ದಾಗಿತ್ತು. ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ, ಅವರು ಅಜರಾಮರ ಎಂದು ಡಾ. ರಾಜಕುಮಾರ್ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ. ರಾಮೇಗೌಡ ತಿಳಿಸಿದರು.

ನಗರದ ಚಾಮರಾಜ ವೃತ್ತದ ಬಳಿಯ ಡಾ. ರಾಜಕುಮಾರ್ ಉದ್ಯಾನವನದಲ್ಲಿ ಭುವನೇಶ್ವರಿ ಸೇವಾ ಟ್ರಸ್ಟ್ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರ 49ನೇ ಜನ್ಮ ದಿನಾಚರಣೆ ಅಂಗವಾಗಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು, ಸಿಹಿ ವಿತರಿಸಿ ಅವರು ಮಾತನಾಡಿದರು.

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಅವರ ಬದುಕಿನ ದಿನಗಳಲ್ಲಿ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ಇಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ ಎಂದು ಅವರು ಹೇಳಿದರು.

ಡಾ. ಪುನೀತ್ ರಾಜಕುಮಾರ್ ಅದ್ಭುತ ನಟ. ಬಾಲ್ಯದಿಂದಲೇ ನಟನೆಯಲ್ಲಿ ತೊಡಗಿಕೊಂಡಿದ್ದ ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅಂತಹ ಅಭಿಮಾನದ ವಿದಾಯ ಎಲ್ಲರಿಗೂ ಸಿಗುವುದಿಲ್ಲ ಎಂದು ಅವರು ಹೇಳಿದರು.

ಸಮಾಜ ಸೇವಕರಾದ ವಿದ್ಯಾ, ಸೇತುರಾಮ್, ಚಂದ್ರು, ಗಂಗಪ್ಪ, ಬೇಗೂರು ಮೂರ್ತಿ, ವಿಶ್ವಮಾನವ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್, ಸೌಮ್ಯ ರಾವ್, ಕಾರ್ಯದರ್ಶಿ ರಮೇಶ್, ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷೆ ನಾಗಶ್ರೀ ಸುಚಿಂದ್ರ, ಗಂಧದಗುಡಿ ಅಪ್ಪು ಅಭಿಮಾನಿಗಳ ಬಳಗ ಅಧ್ಯಕ್ಷ ರವಿ, ಮುಖಂಡರಾದ ಶಿವ, ಕೃಷ್ಣಣ್ಣ, ರಾಜೇಂದ್ರ, ಜಯರಾಮ್, ಚಕ್ರಪಾಣಿ, ಶ್ರೀಕಾಂತ್ ಕಶ್ಯಪ್, ಸುಚಿಂದ್ರ ಮೊದಲಾದವರು ಇದ್ದರು.