ಸಾರಾಂಶ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಕಚೇರಿಯಲ್ಲಿ ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆ ಮಾರ್ಗಸೂಚಿ ಅನ್ವಯ ಸ್ವಧಾರ ಗೃಹ ಹಾಗೂ ಉಜ್ವಲ ಕೇಂದ್ರಗಳನ್ನು ವಿಲೀನಗೊಳಿಸಿ, ಶಕ್ತಿ ಸದನ ಕೇಂದ್ರವಾಗಿ ಸರ್ಕಾರ ಅನುಷ್ಠಾನಗೊಳಿಸಿದೆ. ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅಧ್ಯಕ್ಷತೆಯಲ್ಲಿ ಈ ಸಂಬಂಧ ಜಿಲ್ಲಾಮಟ್ಟದ ಸಮಿತಿ ಸಭೆ ನಡೆಯಿತು.
- ಶಕ್ತಿ ಸದನ ಕೇಂದ್ರ ಜಿಲ್ಲಾಮಟ್ಟದ ಸಮಿತಿ ಸಭೆ - - - ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಕಚೇರಿಯಲ್ಲಿ ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆ ಮಾರ್ಗಸೂಚಿ ಅನ್ವಯ ಸ್ವಧಾರ ಗೃಹ ಹಾಗೂ ಉಜ್ವಲ ಕೇಂದ್ರಗಳನ್ನು ವಿಲೀನಗೊಳಿಸಿ, ಶಕ್ತಿ ಸದನ ಕೇಂದ್ರವಾಗಿ ಸರ್ಕಾರ ಅನುಷ್ಠಾನಗೊಳಿಸಿದೆ. ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅಧ್ಯಕ್ಷತೆಯಲ್ಲಿ ಈ ಸಂಬಂಧ ಜಿಲ್ಲಾಮಟ್ಟದ ಸಮಿತಿ ಸಭೆ ನಡೆಯಿತು.
ಜಿಲ್ಲಾಧಿಕಾರಿ ಮಾತನಾಡಿ, ಪ್ರಸ್ತುತ ದಾವಣಗೆರೆಯಲ್ಲಿ 2 ಸ್ವಧಾರ ಗೃಹ ಹಾಗೂ 1 ರಾಜ್ಯ ಮಹಿಳಾ ನಿಲಯ ಕಾರ್ಯನಿರ್ವಹಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರು ಹಾಗೂ ಅನೈತಿಕ ಸಾಗಾಣಿಕೆಯಲ್ಲಿ ರಕ್ಷಿಸಲ್ಪಟ್ಟ ಮಹಿಳೆಯರಿಗೆ ಸೂಕ್ತ ಕಾನೂನು ನೆರವು, ವೈದ್ಯಕೀಯ ನೆರವು, ವೃತ್ತಿ ತರಬೇತಿ ನೀಡಿ ಅವರಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರದ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಮುಖಾಂತರ ಕ್ರಮ ಅವಶ್ಯಕವಾಗಿದೆ ಎಂದರು.ನೊಂದ ಮಹಿಳೆಯರೊಂದಿಗೆ ಮನೋಸಂವಾದ ಮುಖಾಂತರ ಸಾಂತ್ವನ ನೀಡಲು ಮನೋತಜ್ಞರನ್ನು ಹಾಗೂ ನುರಿತ ಸಮಾಲೋಚಕರೊಂದಿಗೆ ಸಂಪರ್ಕ ಹೊಂದಿ ಮಹಿಳೆಯರ ಶ್ರೇಯಾಭಿವೃದ್ಧಿಗೆ ಶ್ರಮವಹಿಸಬೇಕು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಪಾಲಿಕೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಭಾಗವಹಿಸಿದ್ದರು.- - - -13ಕೆಡಿವಿಜಿ42ಃ:
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿ ಸಭೆ ನಡೆಯಿತು.