ಹಿರಿಯ ಪತ್ರಕರ್ತ ಜಗದೀಶ ಕುಲಕರ್ಣಿ ಮಾತನಾಡಿ, ಪತ್ರಿಕಾ ಭವನಕ್ಕೆ ಹೈಟೆಕ್ ಸ್ಪರ್ಶ ನೀಡಲು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಉದ್ದೇಶಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ಗಮನಕ್ಕೂ ತರಲಾಗಿದೆ ಎಂದರು.

ಗದಗ: ಪತ್ರಿಕಾ ಭವನದ ಕಟ್ಟಡವು ಸುಸಜ್ಜಿತವಾಗಿದ್ದು, ಅಲ್ಪಸ್ವಲ್ಪ ಕೊರತೆಯಿರುವ ಮೂಲ ಸೌಕರ್ಯಗಳನ್ನು ನಗರಸಭೆ ಸೇರಿ ಇತರೆ ಇಲಾಖೆಗಳ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಭರವಸೆ ನೀಡಿದರು.ನಗರದ ಪತ್ರಿಕಾ ಭವನಕ್ಕೆ ಮಂಗಳವಾರ ಭೇಟಿ ನೀಡಿ, ಪತ್ರಿಕಾ ಭವನದ ಮೂಲ ಸೌಕರ್ಯಗಳ ವಿವಿಧ ಬೇಡಿಕೆಗಳ ಕುರಿತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪ್ರಸ್ತಾಪಿಸಿದಾಗ ಸಕಾರಾತ್ಮಕವಾಗಿ ಸ್ಪಂದಿಸಿದರು.ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಗದಗ ನಗರದ ಪತ್ರಿಕಾ ಭವನವು ಮಾದರಿಯಾಗಿದೆ. ಜಿಲ್ಲೆಯ ಪತ್ರಕರ್ತರ ಅಪೇಕ್ಷೆ ಮೇರೆಗೆ ಮೂಲ ಸೌಕರ್ಯಗಳನ್ನು ಒದಗಿಸಲು ನಗರಸಭೆ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.ಹಿರಿಯ ಪತ್ರಕರ್ತ ಜಗದೀಶ ಕುಲಕರ್ಣಿ ಮಾತನಾಡಿ, ಪತ್ರಿಕಾ ಭವನಕ್ಕೆ ಹೈಟೆಕ್ ಸ್ಪರ್ಶ ನೀಡಲು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಉದ್ದೇಶಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ಗಮನಕ್ಕೂ ತರಲಾಗಿದೆ. ಮೊದಲ ಮಹಡಿಯಲ್ಲಿ ಸಭಾಂಗಣ, 2ನೇ ಮಹಡಿಯಲ್ಲಿ ತಾಲೂಕು ಹಾಗೂ ಅನ್ಯ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸಿದ ಪತ್ರಕರ್ತರಿಗೆ ಉಳಿದುಕೊಳ್ಳಲು ಕೊಠಡಿಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದರು.ಪತ್ರಿಕಾ ಭವನದಲ್ಲಿ ಕೊಳವೆ ಬಾವಿ, ಗೇಟಿಗೆ ಆರ್ಚ್ ಮಾಡಿಸುವುದು, ಯುಪಿಎಸ್ ಅಳಡಿಸುವುದು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಸೇರಿ ಪದಾಧಿಕಾರಿಗಳ ಕೊಠಡಿ, ಪತ್ರಿಕಾ‌ ಭವನದ ಹೊರಭಾಗದ ರೂಫ್ ಅಳವಡಿಸುವುದು ಸೇರಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನವನ್ನು ಒದಗಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.ಕಾನಿಪ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿ, ಪತ್ರಿಕಾ ಭವನಕ್ಕೆ ತುರ್ತಾಗಿ ಅಗತ್ಯವಿರುವ ಸೌಲಭ್ಯಗಳ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.ಈ ವೇಳೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಜಿಲ್ಲಾಡಳಿತ ಭವನದ ಭಾವಚಿತ್ರ ನೀಡಿ ಸನ್ಮಾನಿಸಲಾಯಿತು.ರಾಜ್ಯ ಕಾರ್ಯಕಾರಿಣಿ ಸದಸ್ಯ ಅರುಣಕುಮಾರ ಹಿರೇಮಠ, ಖಜಾಂಚಿ ರಾಮಣ್ಣ ವಗ್ಗಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಂಜು ಪತ್ತಾರ, ಸಂತೋಷ ಕೊಣ್ಣೂರ, ವಿನಾಯಕ ಚೌಡಾಪೂರ ಸೇರಿ ಅನೇಕರು ಇದ್ದರು.