ಶಾಲೆಗಳು ಪುನರಾರಂಭಗೊಂಡ ಹಿನ್ನೆಲೆಯಲ್ಲಿ ಕೊರಟಗೆರೆ ಪಟ್ಟಣದ ಗಿರಿನಗರ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಕಲಿಕಾ ಚೇತರಿಕೆ ವರ್ಷ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕನ್ನಡಪ್ರಭ ವಾರ್ತೆ ಕೊರಟಗೆರೆ
ಶಾಲೆಗಳು ಪುನರಾರಂಭಗೊಂಡ ಹಿನ್ನೆಲೆಯಲ್ಲಿ ಕೊರಟಗೆರೆ ಪಟ್ಟಣದ ಗಿರಿನಗರ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಕಲಿಕಾ ಚೇತರಿಕೆ ವರ್ಷ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕೊರಟಗೆರೆ ಟೌನ್ ಕ್ಲಸ್ಟರ್‌ನ ಗಿರಿನಗರದ ಪಿ.ಎಂ.ಶ್ರೀ ಸರ್ಕಾರಿ ಕರ್ನಾಟಕ ಪಬ್ಲಿಕ್ ಪಾಠ ಶಾಲೆಯಲ್ಲಿ ಏರ್ಪಡಿಸಿದ್ದ ದಾಖಲಾತಿ ಆಂದೋಲನ ಕಾರ್ಯಕ್ರದಲ್ಲಿ ಭಾಗವಹಿಸಿದ್ದ ಕೊರಟಗೆರೆ ಪುರಸಭೆಯ ಮುಖ್ಯಾಧಿಕಾರಿ ಉಮೇಶ್ ದಾಖಲಾತಿ ಆಂದೋಲನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುರಸಭೆ ಮುಖ್ಯಾಧಿಕಾರಿ ಉಮೇಶ್ ಮಾತನಾಡಿ, ಶಿಕ್ಷಕರು ಶಾಲಾ ದಾಖಲಾತಿ ಹೆಚ್ಚಳಕ್ಕ ವಿಶೇಷ ಒತ್ತು ನೀಡುವಂತೆ ಹಾಗೂ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಮತ್ತಷ್ಟು ಸುಧಾರಿಸಲು ಅತ್ಯಗತ್ಯ ಕ್ರಮಗಳನ್ನು ಕ್ಯಗೊಳ್ಳುವಂತೆ ತಿಳಿಸಿದ ಅವರು, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿರುವುದು ಕಳವಳಕಾರಿ ಸಂಗತಿ, ಬಡವರು ಮತ್ತು ರೈತರ ಮಕ್ಕಳಿಗೆ ಆರ್ಥಿಕ ಹೊರೆಯಾಗದಂತೆ ತಡೆಯಲು ಸರ್ಕಾರಿ ಶಾಲೆಗಳೆ ಅತ್ಯುತ್ತಮ ವೇದಿಕೆ, ಸರ್ಕಾರಿ ಶಾಲೆಯ ಶಿಕ್ಷಕರು ಉತ್ತಮ ತರಬೇತಿ ಹೊಂದಿದವರಾಗಿದ್ದಾರೆ ಎಂದು ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕ ಶಿವಶಂಕರಯ್ಯ ಮಾತನಾಡಿ, ೨೦೨೬-೨೭ ನೇ ಸಾಲಿನಲ್ಲಿ ಗಿರಿನಗರದ ಪಿ.ಎಂ.ಶ್ರೀ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಕರ್ನಾಟಕ ಪಬ್ಲಿಕ್ ಶಾಲೆಯಾಗಿದ್ದು ಎಲ್.ಕೆ.ಜಿ. ಯಿಂದ ೫ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಬೋಧನೆಯೊಂದಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಲಿದ್ದು, ಶಾಲೆಯಲ್ಲಿ ಮಕ್ಕಳಿಗೆ ಪ್ರತಿದಿನ ಬಿಸಿ ಊಟ, ಹಾಲು, ಮೊಟ್ಟೆ, ಬಾಳೆಹಣ್ಣು ನೀಡಲಾಗುವುದು ಹಾಗೂ ಸ್ಮಾರ್ಟ್ ಕ್ಲಾಸ್ ಮತ್ತು ದ್ವಿಭಾಷಾ ಮಾಧ್ಯಮದಲ್ಲಿ ಭೋಧನೆ ಮಾಡಲಾಗುವುದು, ಉಚಿತ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ, ಶೂ ಸಾಕ್ಸ್, ಪ್ರತಿಭಾವಂತ ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್ ಬೋಧನೆ, ಸುಸಜ್ಜಿತ ಕೊಠಡಿಗಳು, ಶಿಶು ಸ್ನೇಹಿ ಸಂತಸದಾಯಕ ಪ್ರಾಜೆಕ್ಟ್ ಆಧಾರಿತ ಅನುಭವಾತ್ಮಕ ಕಲಿಕೆಗೆ ಒತ್ತು ಇದರೊಂದಿಗೆ ಚಿತ್ರಕಲೆ, ಸಂಗೀತ, ಧ್ಯಾನ, ಯೋಗ ಕರಾಟೆ, ದೈಹಿಕ ಸೃಜನಶೀಲ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ಎಂದರು. ಆಂದೋಲನಾ ಜಾಥಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಶಾಲೆಯ ಸಹ ಶಿಕ್ಷಕರುಗಳಾದ ರಾಮಕೃಷ್ಣಪ್ಪ, ವಿಜಯಲಕ್ಷ್ಮಮ್ಮ, ಬಿ.ಎನ್.ಲೀಲಾ, ಅತಿಥಿ ಶಿಕ್ಷಕರಾದ ಗೀತಾಂಜಲಿ ಹಾಗೂ ಅಡುಗೆ ಸಿಬ್ಬಂದಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.