ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಲು ಅಗತ್ಯ ಸಿದ್ಧತೆ: ಎಂ.ಕೆ. ಸವಿತಾ

| Published : Sep 19 2024, 01:47 AM IST

ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಲು ಅಗತ್ಯ ಸಿದ್ಧತೆ: ಎಂ.ಕೆ. ಸವಿತಾ
Share this Article
  • FB
  • TW
  • Linkdin
  • Email

ಸಾರಾಂಶ

ಅರಮನೆಯಿಂದ ಹೈವೆ ವೃತ್ತದವರೆಗೆ ಮೆರವಣಿಗೆ ಏರ್ಪಡಿಸಲಾಗಿದ್ದು, ಇದರಲ್ಲಿ ಗಜಪಡೆ, ಪೊಲೀಸ್ ಬ್ಯಾಂಡ್, ನಾದಸ್ವರ, ಡೊಳ್ಳುಕುಣಿತ, ಕಂಸಾಳೆ, ವೀರಗಾಸೆ, ಕೊಡವ ನೃತ್ಯ, ಟಿಬೇಟಿಯನ್ ನೃತ್ಯ ಹಾಗೂ ಕೇರಳ ಚೆಂಡೆ ಸೇರಿದಂತೆ ಇನ್ನಿತರ ಕಲಾತಂಡಗಳ ಪ್ರದರ್ಶನದ ಮೂಲಕ ಪ್ರವಾಸಿಗರ ಗಮನ ಸೆಳೆಯುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.

ಕನ್ನಡಪ್ರಭ ವಾರ್ತೆ ಮೈಸೂರು

ಪ್ರವಾಸೋದ್ಯಮ ಮತ್ತು ಶಾಂತಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸೆ. 27 ರಂದು ಬೆಳಗ್ಗೆ 10ಕ್ಕೆ ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ ಹೇಳಿದರು.

ಪ್ರವಾಸೋದ್ಯಮ ಇಲಾಖೆಯ ಸಭಾಂಗಣದಲ್ಲಿ ನಡೆದ, ವಿಶ್ವ ಪ್ರವಾಸೋದ್ಯಮ ದಿನಾಚರಣಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರಮನೆಯಿಂದ ಹೈವೆ ವೃತ್ತದವರೆಗೆ ಮೆರವಣಿಗೆ ಏರ್ಪಡಿಸಲಾಗಿದ್ದು, ಇದರಲ್ಲಿ ಗಜಪಡೆ, ಪೊಲೀಸ್ ಬ್ಯಾಂಡ್, ನಾದಸ್ವರ, ಡೊಳ್ಳುಕುಣಿತ, ಕಂಸಾಳೆ, ವೀರಗಾಸೆ, ಕೊಡವ ನೃತ್ಯ, ಟಿಬೇಟಿಯನ್ ನೃತ್ಯ ಹಾಗೂ ಕೇರಳ ಚೆಂಡೆ ಸೇರಿದಂತೆ ಇನ್ನಿತರ ಕಲಾತಂಡಗಳ ಪ್ರದರ್ಶನದ ಮೂಲಕ ಪ್ರವಾಸಿಗರ ಗಮನ ಸೆಳೆಯುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.

ಮೆರವಣಿಗೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶಾಂತಿಯ ಸಂಕೇತವಾದ ಬಿಳಿ ವಸ್ತ್ರವನ್ನು ಧರಿಸಬೇಕು. ಮೆರವಣಿಗೆಯಲ್ಲಿ ಭಾಗವಹಿಸುವ ಕಲಾತಂಡಗಳು ಹಾಗೂ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆೆ ಮತ್ತು ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅನಾವರಣಗೊಳಿಸುವರು.

ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ:

ಸೆ.27 ರಂದು ನಡೆಯುವ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಚಿತ್ರೀಸಿ ಇನ್ಸ್ಟಾಗ್ರಾಮ್ ರೀಲ್ಸ್ ಆಗಿ ಅಪ್ಲೋಡ್ ಮಾಡಿ, ನಂತರ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಇನ್ಸ್ಟಾಗ್ರಾಮ್ ಪೇಜ್ ಗೆ ಟ್ಯಾಾಗ್ ಮಾಡಬೇಕು. ಅದರಲ್ಲಿ ನಿಗದಿತ ಸಮಯದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಒಂದು ವಿಡಿಯೋ ಹಾಗೂ ಉತ್ತಮ ಕಂಟೆಂಟ್ ಇರುವ ಒಂದು ವಿಡಿಯೋಗೆ ಅ. 5 ರಂದು ಅರಮನೆ ಮೈದಾನದಲ್ಲಿ ನಡೆಯುವ ದಸರಾ ವೇದಿಕೆಯಲ್ಲಿ ಬಹುಮಾನವನ್ನು ನೀಡಲಾಗುತ್ತದೆ.

ಅರಮನೆ ಮಂಡಳಿಯ ಉಪ ನಿರ್ದೇಶಕ ಟಿ.ಎಸ್. ಸುಬ್ರಮಣ್ಯ, ವಸ್ತುಪ್ರದರ್ಶನ ಕಾರ್ಯನಿರ್ವಹಣಾಧಿಕಾರಿ ರುದ್ರೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಮೈಸೂರು ಟ್ರಾವಲ್ಸ್ ಅಸೋಸಿಯೇಶನ್ ಅಧ್ಯಕ್ಷ ಜಯಪ್ರಕಾಶ್ ರಾಜೇ ಅರಸ್, ಸ್ಕಾಲ್ ಇಂಟರ್ನ್ಯಾಷನಲ್ ಮೈಸೂರು ವಿಭಾಗದ ಅಧ್ಯಕ್ಷ ಬಿ.ಎಸ್.ಪ್ರಶಾಂತ್, ಟೂರಿಸ್ಟ್ ಗೈಡ್ಸ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಜೆ.ಅಶೋಕ್, ಚಾಲಕರ ಸಂಘದ ಅಧ್ಯಕ್ಷ ನಾಗರಾಜು, ಡಿ.ದೇವರಾಜು ಅರಸು ರಸ್ತೆ ಅಂಗಡಿ ಮಾಲೀಕರ ಹಾಗೂ ಬಾಡಿಗೆದಾರರು ಸಂಘದ ಅಧ್ಯಕ್ಷ ಪ್ರಕಾಶ್ ಭರತ್ ಗೌಡ, ಸಮರ್ಥ್ ಇತರರು ಇದ್ದರು.