ತಂತ್ರಜ್ಞಾನ ಅಭಿವೃದ್ಧಿಯಾಗುತ್ತಿರುವಂತೆ ಸೈಬರ್ ಅಪರಾಧಗಳ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದ್ದು, ಯುವಜನತೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಬದುಕಿನ ಅಮೂಲ್ಯ ಕ್ಷಣಗಳನ್ನು ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಪವನ್ ಕುಮಾರ್ ಎಂ. ಹೇಳಿದ್ದಾರೆ.
ಕುಂದಾಪುರ: ತಂತ್ರಜ್ಞಾನ ಅಭಿವೃದ್ಧಿಯಾಗುತ್ತಿರುವಂತೆ ಸೈಬರ್ ಅಪರಾಧಗಳ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದ್ದು, ಯುವಜನತೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಬದುಕಿನ ಅಮೂಲ್ಯ ಕ್ಷಣಗಳನ್ನು ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಪವನ್ ಕುಮಾರ್ ಎಂ. ಹೇಳಿದ್ದಾರೆ.ಯಡಾಡಿ-ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನಲ್ಲಿ ಶುಕ್ರವಾರ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಇತ್ತೀಚಿನ ಸೈಬರ್ ಅಪರಾಧಗಳ ಪ್ರವೃತ್ತಿಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳು ಕುರಿತ ಸೈಬರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ರಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ರೂಪಿಸಿಕೊಳ್ಳುವ ಮಹತ್ವದ ಹಂತವಾಗಿದೆ. ತಂತ್ರಜ್ಞಾನವನ್ನು ಜ್ಞಾನಾರ್ಜನೆ ಮತ್ತು ಕಲಿಕೆಗೆ ಮಾತ್ರ ಸೀಮಿತಗೊಳಿಸಿ, ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಗೀಳಿಗೆ ಬಿದ್ದು ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿಕೊಳ್ಳಬಾರದು ಎಂದರು.ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ಸಾಮಾಜಿಕ ಜಾಲತಾಣಗಳ ವ್ಯಸನವು ಉಜ್ವಲ ಭವಿಷ್ಯಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಟ್ರಸ್ಟ್‌ನ ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಪ್ರಾಂಶುಪಾಲ ರಂಜನ್ ಶೆಟ್ಟಿ ಇದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿನಯ್ ಕುಮಾರ್ ನಿರೂಪಿಸಿದರು.