ಅನೇಕರ ತ್ಯಾಗ, ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ನಾವು ಹೇಗೆ ಸದುಪಯೋಗ ಪಡಿಸಿಕೊಂಡಿದ್ದೇವೆ ಎಂಬುದನ್ನು ಆತ್ಮಾವಲೋಕನಾ ಮಾಡಿಕೊಳ್ಳಬೇಕಿದೆ ಎಂದು ಶಾಸಕಿ ಎಂ.ಪಿ. ಲತಾಮಲ್ಲಿಕಾರ್ಜುನ ಹೇಳಿದರು.
ಹರಪನಹಳ್ಳಿ: ಅನೇಕರ ತ್ಯಾಗ, ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ನಾವು ಹೇಗೆ ಸದುಪಯೋಗ ಪಡಿಸಿಕೊಂಡಿದ್ದೇವೆ ಎಂಬುದನ್ನು ಆತ್ಮಾವಲೋಕನಾ ಮಾಡಿಕೊಳ್ಳಬೇಕಿದೆ ಎಂದು ಶಾಸಕಿ ಎಂ.ಪಿ. ಲತಾಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ಸ್ಟೇಡಿಯಂನಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.ಸ್ವಾತಂತ್ರ್ಯ ಎಂದರೆ ಕೇವಲ ಬಂಧನದಿಂದ ಮುಕ್ತವಲ್ಲ. ನಮಗೆ ನಮ್ಮ ಸಂವಿಧಾನ ಕರ್ತವ್ಯಗಳನ್ನು ನೀಡಿದೆ. ಒಗ್ಗಟ್ಟಿನಿಂದ ಬದುಕುತ್ತ ನಮ್ಮ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಬೇಕಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಗಳನ್ನು ಪರಿಶೀಲಿಸದೆ ನಂಬಬಾರದು ಎಂದು ತಿಳಿಸಿದರು.
ನಮ್ಮ ಮುಖ್ಯ ಮಂತ್ರಿಗಳು ಭಾರತ ಜೋಡೋ ಸಂಘ ಸ್ಥಾಪನೆಗೆ ಸೂಚಿಸಿದ್ದಾರೆ. ಪ್ಪತಿಯೊಂದು ಗ್ರಾಪಂ ಮಟ್ಟದಲ್ಲಿ ಭಾರತ ಜೋಡೋ ಸಂಘ ಸ್ಥಾಪನೆ ಮಾಡಬೇಕಿದೆ. 100 ಯುವಕ, ಯುವತಿಯರು ಇದರಲ್ಲಿ ಇರಬೇಕು. ಅವರಿಗೆ ಪ್ರತಿಭೆ ಹೊರತರಲು ಅವಕಾಶ ಇರುತ್ತದೆ ಎಂದ ಅವರು 16 ರಿಂದ 35 ವಯಸ್ಸಿನವರು ಈ ಸಂಘದಲ್ಲಿ ನೋಂದಣಿ ಮಾಡಿಸಬೇಕು. ವರ್ಷಕ್ಕೆ 10 ಲಕ್ಷ ಭಾರತ ಜೋಡೋ ಸಂಘಕ್ಕೆ ಸರ್ಕಾರ ನೀಡುತ್ತದೆ ಎಂದು ತಿಳಿಸಿದರು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕಂದಾಯ ಉಪವಿಭಾಗಾಧಿಕಾರಿ ಟಿ. ಸುರೇಶಕುಮಾರ ಸ್ವಾತಂತ್ರ್ಯ ಚಳವಳಿಗೆ ಹರಪನಹಳ್ಳಿ ತಾಲೂಕಿನ ಕೊಡುಗೆ ಅಪಾರವಾಗಿದೆ. ಇಂತಹ ಸ್ವಾತಂತ್ರ್ಯ ಯೋಧರ ಆದರ್ಶ ನಮ್ಮ ಯುವ ಪೀಳಿಗೆಗೆ ಅಗತ್ಯವಾಗಿದೆ.
ಇಂದು ಸಾಮಾಜಿಕ ಅಸಮತೋಲನ ಹೋಗಲಾಡಿಸಲು ಇನ್ನೂ ಅನೇಕ ಕಾರ್ಯಕ್ರಮಗಳನ್ನು ಮಾಡಬೇಕಿದೆ ಎಂದು ತಿಳಿಸಿದರು.ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳ ಪೋಷಕರನ್ನು ಸನ್ಮಾನಿಸಲಾಯಿತು.ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಎಂ. ಉದಯಶಂಕರ, ತಹಸೀಲ್ದಾರ್ ಬಿ.ವಿ. ಗಿರೀಶಬಾಬು, ಡಿವೈಎಸ್ಪಿ ಸಂತೋಷ ಚವ್ಹಾಣ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್. ಚಂದ್ರಶೇಖರ, ಬಿಇಒ ಲೇಪಾಕ್ಷಪ್ಪ, ನಗರಸಭೆ ಪೌರಾಯುಕ್ತೆ ರೇಣುಕಾ ಎಸ್. ದೇಸಾಯಿ, ಟಿ.ಎಚ್.ಒ. ಅರವಿಂದ, ಸಿಪಿಐ ಮಹಾಂತೇಶ ಸಜ್ಜನ, ಪಿಎಸ್‌ಐ ಶಂಭುಲಿಂಗ ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಲಾಟಿ ದಾದಾಪೀರ, ಉದ್ದಾರ ಗಣೇಶ, ಎಇಇ ರಾಘವೇಂದ್ರ, ಸಮಾಜ ಕಲ್ಯಾಣಾಧಿಕಾರಿ ಗಂಗಪ್ಪ, ಪೂಜಾರ ಕೃಷ್ಣನಾಯ್ಕ, ಕೂಲ್ ಇರ್ಫಾನ್, ದೈಹಿಕ ಪರಿವೀಕ್ಷಕ ಷಣ್ಮುಖಪ್ಪ, ಇಸಿಒ ವೀರೇಶ, ಪಂಪನಾಯ್ಕ, ಇತರರು ಉಪಸ್ಥಿತರಿದ್ದರು.